Connect with us

LATEST NEWS

ನಿಷೇಧಿತ ಉಗ್ರ ಸಂಘಟನೆ ಪಿಎಫ್ಐ ಮುಖಂಡನ ಬಳಿ ಅಕ್ರಮ ಪಿಸ್ತೂಲು – ಹಿಂದೂಗಳ ಹತ್ಯೆಗೆ ಸಂಚು – ವಿಶ್ವ ಹಿಂದೂ ಪರಿಷದ್

ಮಂಗಳೂರು ಜನವರಿ 10: ಮಂಗಳೂರಿನ ಮೂಡುಶೆಡ್ಡೆಯಲ್ಲಿ ನಿಷೇಧಿತ ಉಗ್ರ ಸಂಘಟನೆ ಪಿಫ್ಐ ಮುಖಂಡ ಬದ್ರುದ್ದೀನ್ ಅಕ್ರಮ ಪಿಸ್ತೂಲಿನಿಂದ ಗುಂಡು ಹರಿಸಿದ ಪರಿಣಾಮ ಒಬ್ಬ ವ್ಯಕ್ತಿಗೆ ಗಂಭೀರ ಗಾಯವಾಗಿದೆ. ಅಕ್ರಮವಾಗಿ ಪಿಸ್ತೂಲು ಮದ್ದುಗುಂಡುಗಳನ್ನು ಇಟ್ಟುಕೊಂಡು ಹಿಂದುಗಳ ಮತ್ತು ಹಿಂದೂ ಮುಖಂಡರ ಕೊಲೆಗೆ ಸಂಚು ರೂಪಿಸಿತ್ತಿರುವ ಬಗ್ಗೆ ಸಂಶಯ ವ್ಯಕ್ತವಾಗುತ್ತಿದ್ದು, ಪಿಫ್ಐ ಸಂಘಟನೆಯನ್ನು ಇಂತಹದ್ದೇ ಕಾರಣಕ್ಕಾಗಿ ನಿಷೇದಿಸಿದ್ದು ಅಲ್ಲದೆ ಇದರ ಮುಖಂಡರು ಅಕ್ರಮ ಪಿಸ್ತೂಲು ಹೊಂದಿರುವುದು ಇಡೀ ಜಿಲ್ಲೆಯಲ್ಲಿ ಆತಂಕಕ್ಕೆ ಕಾರಣವಾಗಿದೆ ಹಾಗಾಗಿ ಈ ಪ್ರಕರಣವನ್ನು ಉನ್ನತ ಮಟ್ಟದ ತನಿಖೆ ನಡೆಸಲು ಆಗ್ರಹಿಸಲಾಗಿದೆ.


ಮಂಗಳೂರು ಸೇರಿದಂತೆ ಕರಾವಳಿ ಉಗ್ರರಿಗೆ ಭಯೋತ್ಪಾದಕ ಚಟುವಟಿಕೆಗಳ ಪ್ರಯೋಗಶಾಲೆಯಾಗುತ್ತಿದ್ದು, ಇದರ ಹಿಂದೆಯೂ ದೀಪ್ತಿ ಮಾರ್ಲ ಪ್ರಕರಣ ಮತ್ತು ಮಂಗಳೂರಿನಲ್ಲಿ ಕೆಲವೆಡೆ NIA ದಾಳಿ ನಡೆಸಿದಾಗ ನಮ್ಮ ಸಂಘಟನೆ NIA ಕಚೇರಿಯನ್ನು ಮಂಗಳೂರಿನಲ್ಲಿ ಸ್ಥಾಪಿಸಲು ಮನವಿ ಮಾಡಿದ್ದು, ಮಾನ್ಯ ಸಂಸದರು ಇದರ ಬಗ್ಗೆ ಪ್ರಯತ್ನಿಸುತ್ತಿದ್ದು, ಉಗ್ರ ಚಟುವಟಿಕೆಗಳಿಗೆ ಕಡಿವಾಣ ಹಾಕಲು NIA ಕಚೇರಿಯನ್ನು ಮಂಗಳೂರಿನಲ್ಲಿ ಸ್ಥಾಪಿಸಲು ಮನವಿ ವಿಎಚ್ ಪಿ ಮನವಿ ಮಾಡಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *