BELTHANGADI
ಬ್ಯಾನರ್ ವಿವಾದ – ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಬಿತ್ತು ಕೇಸ್

ಪುತ್ತೂರು ಅಕ್ಟೋಬರ್ 30: ಧರ್ಮಸ್ಥಳದಲ್ಲಿ ನಡೆದ ಧರ್ಮಸಂರಕ್ಷಣಾ ಯಾತ್ರೆ ವಿರುದ್ದ ವಾಗಿ ಬ್ಯಾನರ್ ಆಳವಡಿಸಿ ಪ್ರಾದೇಶಿಕ ಗುಂಪುಗಳ ನಡುವೆ ವೈರತ್ವಕ್ಕೆ ಕಾರಣವಾಗುವ ಬರಹ ಬರೆದ ಹಿನ್ನಲೆ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಧರ್ಮಸಂರಕ್ಷಣಾ ಯಾತ್ರೆಯ ಸಲುವಾಗಿ, ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದು ಯಾತ್ರೆಗೆ ಬೆಂಬಲ ಸೂಚಿಸಿ ಅಳವಡಿಸಲಾಗಿದ್ದ ಬ್ಯಾನರ್ ಗಳ ಸಮೀಪದಲ್ಲೇ, ಸದ್ರಿ ಪಾದಯಾತ್ರೆಯನ್ನು ನಿಲ್ಲಿಸುವ ಒಳಸಂಚಿನಿಂದ ಪ್ರಾದೇಶಿಕ ಗುಂಪುಗಳ ನಡುವಣ ಸೌಹಾರ್ದಕ್ಕೆ ಬಾಧಕವಾಗುವಂತಹ ಬರವಣೆಗೆಗಳನ್ನು ಹೊಂದಿರುವ ಬ್ಯಾನರ್ ಗಳನ್ನು ಅಳವಡಿಸಿ, ಪ್ರಾದೇಶಿಕ ಗುಂಪುಗಳ ನಡುವೆ ವೈರತ್ವ, ದ್ವೇಷ ,ವೈಮನಸ್ಸು ಭಾವನೆಗಳನ್ನು ಬಿತ್ತಿಸಿ ಅಸೌಹಾರ್ಧತೆಯನ್ನು ಸೃಷ್ಠಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಿ ಬೆಳ್ತಂಗಡಿ ನಿವಾಸಿ ಸಂದೀಪ್ ರೈ ಅವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ಹಿನ್ನಲೆ ಮಹೇಶ್ ಶೆಟ್ಟಿ ತಿಮರೋಡಿ, ಅನಿಲ್ ಕುಮಾರ್ ಅಂತರ, ಕಿರಣ್ ಗೌಡ, ಪ್ರಜ್ವಲ್ ಕೆ ವಿ ಗೌಡ, ಮನೋಹರ್ ಮನ್ನಡ್ಕ,ಮನೋಜ್ ಸಾಲ್ಯಾನ್ ಕುಂಜರ್ಪ ಮೇಲೆ ಪ್ರಕರಣ ದಾಖಲಾಗಿದ್ದು, ಅಲ್ಲದೆ ಬ್ಯಾನರ್ ಅಳವಡಿಸಲು ಅನುಮತಿ ನೀಡಿದ ಉಜಿರೆ ಅಭಿವೃದ್ಧಿ ಅಧಿಕಾರಿ ಮತ್ತು ಕಾರ್ಯರ್ಶಿ ವಿರುದ್ಧವೂ ದೂರು ದಾಖಲಾಗಿದೆ. IPC 120(B), 154(A), 153(B) ಯಂತೆ ಪ್ರಕರಣ ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.