BANTWAL
ಬಂಟ್ವಾಳ – ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ಚಾಲಕ ಸಾ**ವು

ಬಂಟ್ವಾಳ ಮೇ 27: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ಬಿ.ಸಿ.ರೋಡು- ಕೈಕಂಬ ಮಧ್ಯೆ ಮಂಗಳವಾರ ಮುಂಜಾನೆ ನಡೆದಿದೆ.
ಮೃತರನ್ನು ಕೊಳ್ನಾಡು ನೂಜಿಬೈಲು ಭಂಡಾರದಮನೆ ನಿವಾಸಿ ಜಯರಾಮ್ (50) ಎಂದು ಗುರುತಿಸಲಾಗಿದೆ. ಜಯರಾಮ್ ಅವರು ತುಂಬೆ ಆಸ್ಪತ್ರೆಯ ಕ್ಯಾಂಟೀನ್ ನಲ್ಲಿ ಕೆಲಸ ಮಾಡುತ್ತಿದ್ದು, ಮುಂಜಾನೆ 4.30ರ ಸುಮಾರಿಗೆ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

1 Comment