LATEST NEWS
ಬಂಟ್ವಾಳ – ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣ – ಮತ್ತೊಬ್ಬ ಆರೋಪಿ ಅರೆಸ್ಟ್

ಮಂಗಳೂರು ಜುಲೈ 21: ಬಂಟ್ವಾಳದಲ್ಲಿ ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಅಮ್ಮುಂಜೆ ಗ್ರಾಮದ ನಿವಾಸಿ ಶಾಹಿತ್ ಯಾನೆ ಸಾಹಿತ್ (24) ಎಂದು ಗುರುತಿಸಲಾಗಿದೆ. ಇದರೊಂದಿಗೆ ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ಮೇ 27ರಂದು ಅಬ್ದುಲ್ ರಹ್ಮಾನ್ ಅವರನ್ನು ಮಾರಕಾಯುಧಗಳಿಂದ ಕಡಿದು ಹತ್ಯೆಗೈದಿದ್ದರು. ಅವರೊಂದಿಗಿದ್ದ ಸ್ನೇಹಿತ ಕಲಂದರ್ ಶಾಫಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದು, ಇದೀಗ ಅಮ್ಮುಂಜೆ ಗ್ರಾಮದ ನಿವಾಸಿ ಶಾಹಿತ್ ಯಾನೆ ಸಾಹಿತ್ (24) ಬಂಧಿತಸಲಾಗಿದ್ದು. ಈ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 11ಕ್ಕೆ ಏರಿದೆ. ಆರೋಪಿ ಶಾಹಿತ್ ಯಾನೆ ಸಾಹಿತ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಈತನನ್ನು ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ನೀಡಿದೆ.
