Connect with us

LATEST NEWS

ಬಂಟ್ವಾಳ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ -ಬಂಧಿತರ ಸಂಖ್ಯೆ 8ಕ್ಕೆ ಏರಿಕೆ

ಮಂಗಳೂರು ಜೂನ್ 06: ಬಂಟ್ವಾಳದ ಇರಾಕೋಡಿಯಲ್ಲಿ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ.


ಬಂಧಿತನನ್ನು ಶೃಂಗೇರಿ ತಾಲ್ಲೂಕಿನ ಬೆಟ್ಟಗೆರೆ ಗ್ರಾಮದ ನಿವಾಸಿ ರವಿ ಸಂಜಯ್ (29) ಎಂದು ಗುರುತಿಸಲಾಗಿದೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈಗಾಗಲೇ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪಕ್ (21), ಪೃಥ್ವಿರಾಜ್ (21) ಹಾಗೂ ಚಿಂತನ್ (19), ಸುಮಿತ್ ಆಚಾರ್ಯ (27), ಅಭಿನ್ ರೈ (32) ಹಾಗೂ ತೇಜಾಕ್ಷ (24) ಮತ್ತು ರವಿರಾಜ್ (23) ಎಂಬುವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಕೊಳತ್ತಮಜಲು ನಿವಾಸಿ ಅಬ್ದುಲ್ ರಹಿಮಾನ್ ಅವರನ್ನು ಇರಾಕೋಡಿಯಲ್ಲಿ ಮೇ 27ರಂದು ಹತ್ಯೆ ಮಾಡಲಾಗಿತ್ತು. ಅವರ ಜೊತೆಗಿದ್ದ ಕಲಂದರ್ ಶಾಫಿ ಎಂಬವರ ಮೇಲೆ ಹಲ್ಲೆ ನಡೆಸಲಾಗಿತ್ತು. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿತ್ತು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *