Connect with us

    BANTWAL

    ಬಂಟ್ವಾಳ – ಭೀಕರ ರಸ್ತೆ ಅಪಘಾತಕ್ಕೆ ನವವಿವಾಹಿತೆಯ ಧಾರುಣ ಸಾವು

    ಬಂಟ್ವಾಳ ಸೆಪ್ಟೆಂಬರ್ 07: ನವ ದಂಪತಿಗಳು ಇಬ್ಬರು ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿ ಬಳಿಕ ಕೆಎಸ್ಆರ್ ಟಿಸಿ ಬಸ್ ಗೆ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಈ ಅಪಘಾತದಲ್ಲಿ ನವವಿವಾಹಿತೆ ಸಾವನ್ನಪ್ಪಿದ್ದು ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ.


    ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾವನ್ನಪ್ಪಿದ ನವವಿವಾಹಿತೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಸೆಪ್ಟೆಂಬರ್ 5 ರಂದು ದೇಂತಡ್ಕ ದೇವಸ್ಥಾನದಲ್ಲಿ ಮದುವೆ ನಡೆದಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಇಂದು ಅಲ್ಲಿನ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದು ವಾಪಸು ಮಾವನ ಮನೆಗೆ ಹೋಗುವ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.

    ಆಲ್ಟೋ ಕಾರು ನಿಯಂತ್ರಣ ತಪ್ಪಿ ರಸ್ತೆಯಿಂದ ಡಿವೈಡರ್ ಮೇಲಿನಿಂದ ಇನ್ನೊಂದು ಬದಿಗೆ ಹಾರಿ ಮಂಗಳೂರು ಕಡೆಯಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಕೆ.ಎಸ್‌.ಆರ್‌ಟಿ.ಸಿ ಬಸ್ ಗೆ ಡಿಕ್ಕಿ ಹೊಡೆದಿದೆ.
    ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು ಸಹಪ್ರಯಾಣಿಕೆ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಘಟನೆಯಿಂದ ಹೆದ್ದಾರಿಯಲ್ಲಿ ಕೆಲ ಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಸ್ಥಳಕ್ಕೆ ಮೆಲ್ಕಾರ್ ‌ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply