Connect with us

    BANTWAL

    ಬಂಟ್ವಾಳ – ಮರಕ್ಕೆ ಸ್ಕೂಟರ್ ಡಿಕ್ಕಿ ಸವಾರ ಅಕ್ಷಿತ್ ಸಾವು

    ಬಂಟ್ವಾಳ, ಮಾರ್ಚ್ 12: ಸ್ಕೂಟರ್ ಒಂದು ಸವಾರನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಮಾರಿಪಳ್ಳದಲ್ಲಿ ಇಂದು ಮುಂಜಾನೆ ಸಂಭವಿಸಿದೆ.


    ಮೃತರನ್ನು ಕಲ್ಲಡ್ಕ ಸಮೀಪದ ಅಮ್ಟಾಡಿ ನಿವಾಸಿ ಅಕ್ಷಿತ್ (25) ಎಂದು ಗುರುತಿಸಲಾಗಿದೆ. ಅಕ್ಷಿತ್ ಮಂಗಳೂರು ಖಾಸಗಿ ಕಂಪೆನಿಯೊಂದರಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಸೋಮವಾರ ರಾತ್ರಿ ಪಾಳಿಯ ಕೆಲಸ ಮುಗಿಸಿ ಇಂದು ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ ಮನೆಯತ್ತ ಹೊರಟಿದ್ದರೆನ್ನಲಾಗಿದೆ. ಅಂದಾಜು 4:30 ಗಂಟೆಗೆ ಅವರು ಸಂಚರಿಸುತ್ತಿದ್ದ ದ್ವಿಚಕ್ರ ವಾಹನ ಮಾರಿಪಳ್ಳ ಹೆದ್ದಾರಿ ಬದಿಯ ಮರಕ್ಕೆ ಢಿಕ್ಕಿ ಹೊಡೆದ ರೀತಿಯಲ್ಲಿ ಪತ್ತೆಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಅಕ್ಷಿತ್ ರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply