BANTWAL
ಬಂಟ್ವಾಳ – ಸ್ಕೂಟರ್ ಗೆ ಡಿಕ್ಕಿ ಹೊಡೆದ ಟಿಪ್ಪರ್ ಲಾರಿ – ಸ್ಕೂಟರ್ ಸವಾರ ಸಾವು
ಬಂಟ್ವಾಳ ಮೇ 02 : ಟಿಪ್ಪರ್ ಲಾರಿಯೊಂದು ಸ್ಕೂಟರ್ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ ಬಳಿ ನಡೆದಿದೆ.
ಮೃತರನ್ನು ನರಿಕೊಂಬು ಗ್ರಾಮದ ಪೊಯಿತ್ತಾಜೆ ನಿವಾಸಿ ಸುಬ್ಬ ಭಂಡಾರಿ(68) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅವರು ಬಿ.ಸಿ.ರೋಡಿನಲ್ಲಿ ನಡೆದ ಮದುವೆಗೆ ಬಂದಿದ್ದ ವೇಳೆ ಅಪಘಾತ ನಡೆದಿದೆ. ಅಪಘಾತದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ಕೊಂಚ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿದ್ದು, ಬಂಟ್ವಾಳ ಸಂಚಾರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
You must be logged in to post a comment Login