BANTWAL
ಬಂಟ್ವಾಳ – ಕಾರು ಪಲ್ಟಿ ವಿಧ್ಯಾರ್ಥಿನಿ ಸಾವು…!!
ಬಂಟ್ವಾಳ ಜುಲೈ 06 : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ಈ ಘಟನೆಯಲ್ಲಿ ಕಾರಿನಲ್ಲಿದ್ದ ವಿಧ್ಯಾರ್ಥಿನಿ ಸಾವನಪ್ಪಿದ್ದಾರೆ. ಮೃತರನ್ನು ಪುತ್ತೂರು ಕೂರ್ನಡ್ಕ ನಿವಾಸಿ ಇಬ್ರಾಹಿಂ ಅವರ ಪುತ್ರಿ ಖತೀಜಹನ (20) ಎಂದು ಗುರುತಿಸಲಾಗಿದೆ.
ಖತೀಜಹನ ಅವರು ತಾಯಿ ಸಮೀಮಾ ಅವರ ಜೊತೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಅಲರ್ಜಿ ರೋಗಕ್ಕೆ ಚಿಕಿತ್ಸೆ ಪಡೆಯುವ ಹಿನ್ನೆಲೆಯಲ್ಲಿ ವೈದ್ಯರನ್ನು ಬೇಟಿ ಮಾಡಲು ಕಾರಿನಲ್ಲಿ ಪುತ್ತೂರಿನಿಂದ ಹೋಗುವ ವೇಳೆ ಘಟನೆ ನಡೆದಿದೆ. ಪುತ್ತೂರಿನಿಂದ ಮಂಗಳೂರು ಕಡೆಗೆ ತೆರಳುವ ಸಂದರ್ಭದಲ್ಲಿ ರಾಮಲ್ ಕಟ್ಟೆ ತಲುಪಿದಾಗ ಮಳೆ ಜೋರಾಗಿ ಸುರಿಯುತ್ತಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಗುಡ್ಡಕ್ಕೆ ಗುದ್ದಿ ರಸ್ತೆಗೆ ಪಲ್ಟಿಯಾಗಿದೆ.
ಅಪಘಾತದ ತೀವ್ರತೆಗೆ ಕಾರಿನ ಬಾಗಿಲು ಕಿತ್ತುಹೋಗಿ ಕಾರಿನ ಒಳಗಿದ್ದ ಖತೀಜಹನ ಹೊರೆಕ್ಕೆಸೆಯಲ್ಟಿಟ್ಟಿದ್ದಾಳೆ. ಗಂಭೀರ ಗಾಯಗೊಂಡ ಈಕೆಯನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ಯೊದರು ಯಾವುದೇ ಪ್ರಯೋಜನವಾಗಿಲ್ಲ. ಅದಾಗಲೇ ಆಕೆ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ.
ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಸುತೇಶ್ ಮತ್ತು ಸಿಬ್ಬಂದಿಗಳು ಬೇಟಿ ನೀಡಿದ್ದಾರೆ.
You must be logged in to post a comment Login