Connect with us

    LATEST NEWS

    ಸುರತ್ಕಲ್ ಹಾಗೂ ಬಂಟ್ವಾಳ ಕ್ಷೇತ್ರದ ಮೇಲೆ ಹೆಚ್ಚಿನ ನಿಗಾ – ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್

    ಸುರತ್ಕಲ್ ಹಾಗೂ ಬಂಟ್ವಾಳ ಕ್ಷೇತ್ರದ ಮೇಲೆ ಹೆಚ್ಚಿನ ನಿಗಾ – ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್

    ಮಂಗಳೂರು ಮಾರ್ಚ್ 27: ರಾಜ್ಯದ ಚುನಾವಣಾ ದಿನಾಂಕ ಘೋಷಣೆಯಾದ ಹಿನ್ನಲೆಯಲ್ಲಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಇಂದು ಸುದ್ದಿಗೋಷ್ಠಿ ನಡೆಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಒಟ್ಟು 18,67,194 ಮತದಾರರಿದ್ದು, ಕಳೆದ ಸಾಲಿಗಿಂತ ಶೇಕಡ 11ರಷ್ಟು ಮತ ಹೆಚ್ಚುವರಿಯಾಗಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ 8,21, 123 ಪುರುಷ ಹಾಗೂ 8,46,030 ಮಹಿಳೆ ಮತದಾರರು ಇದ್ದ, ಈ ಬಾರಿ 41 ತೃತೀಯ ಲಿಂಗಿಗಳು ಮತ ಹಾಕಲಿದ್ದಾರೆ ಎಂದು ತಿಳಿಸಿದರು.

    ಒಟ್ಟು 1858 ಮತಗಟ್ಟೆಗಳಿದ್ದು, ಅದರಲ್ಲಿ 68 ಆಕ್ಸಿಲರಿ ಮತಗಟ್ಟೆಗಳಿವೆ, ಒಟ್ಟು 1858 ಮತಗಟ್ಟೆಗಳಿಗೆ 2787 ಬ್ಯಾಲೆಟ್ ಯುನಿಟ್ಸ್, 27 ಕಂಟ್ರೋಲ್ ಯುನಿಟ್ ಹಾಗೂ 2450 ವಿವಿ ಪ್ಯಾಟ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

    ಗ್ರಾಮೀಣ ಭಾಗದಲ್ಲಿ 1300ಕ್ಕಿಂತ ಹಾಗೂ ನಗರದಲ್ಲಿ 1400ಕ್ಕಿಂತ ಹೆಚ್ಚು ಮತವಿದ್ದಲ್ಲಿ ಆಕ್ಸಿಲರಿ ಮತಗಟ್ಟೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಜಿಲ್ಲೆಯಲ್ಲಿ ಎಲೆಕ್ಟ್ರಾನಿಕ್ ವೋಟಿಂಗ್ ಮೆಶಿನ್ ಈಗಾಗಲೇ ಬಂದಿದ್ದು, ಪರಿಶೀಲನೆ ನಡೆಸಲಾಗಿದ್ದು, ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿ ವಿವಿ ಪ್ಯಾಟ್ ಅನ್ನು ಕೂಡ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದರು.
    ಸುರತ್ಕಲ್, ಬಂಟ್ವಾಳ ಕ್ಷೇತ್ರದಲ್ಲಿ ಹೆಚ್ಚು ವೆಚ್ಚ ಮಾಡುವ ಮಾಹಿತಿ ಹಿನ್ನೆಲೆಯಲ್ಲಿ ಹೆಚ್ಚಿನ ನಿಗಾ ಇಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

    ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಎಲ್ಲಾ ಸರಕಾರಿ ಯೋಜನೆ, ಸೌಲಭ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ, ಸಚಿವರು ಹಾಗೂ ಎಂಎಲ್ಎ ಗಳು ಯಾವುದೇ ಸಾರ್ವಜನಿಕ‌ ಕಚೇರಿಯನ್ನು ಚುನಾವಣೆಯ ಹಿನ್ನೆಲೆಯಲ್ಲಿ ಬಳಸುವಂತಿಲ್ಲ ಎಂದು ಹೇಳಿದರು, ಅವರಾಗಿಯೇ ಕಚೇರಿಯನ್ನು ಜಿಲ್ಲಾಡಳಿತದ ವಶಕ್ಕೆ ನೀಡಿದಲ್ಲಿ ಉತ್ತಮ, ಒಂದು ವೇಳೆ ಕಚೇರಿಯನ್ನು ರಾಜಕೀಯಕ್ಕೆ ಬಳಸಿದರೆ ನಾವೇ ವಶಪಡಿಸುವ ಸ್ಥಿತಿ ಬರಬಹುದು ಎಂದು ಎಚ್ಚರಿಕೆ ನೀಡಿದರು.

    ಸಚಿವರು ಮತ್ತು ಸಂಸದರಿಗೆ ಕಚೇರಿಯಿಂದ ಮನೆಯವರೆಗೆ ತೆರಳಲು ಮಾತ್ರ ವಾಹನ ಸೌಲಭ್ಯ ನೀಡಲಾಗುವುದು, ಉಳಿದಂತೆ ಜಿಲ್ಲಾಡಳಿತದಿಂದ ಒದಗಿಸಲಾಗುವ ಎಲ್ಲಾ ವಾಹನ ಸೌಲಭ್ಯ ಸ್ಥಗಿತಗೊಳಿಸಲಾಗುವುದು ಎಂದು ಹೇಳಿದರು. ಅನುಮತಿಯ ಹೊಂದಿರದ ಯಾವುದೇ ಬ್ಯಾನರ್ ಹಾಗೂ ಪೋಸ್ಟರ್ ಗಳನ್ನು ತೆಗೆಯಲಾಗುವುದು ಎಂದು ತಿಳಿಸಿದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *