BANTWAL
ಬಂಟ್ವಾಳ: ಅಕ್ರಮ ಗೋ ಸಾಗಾಟ ಪ್ರಕರಣದ ಆರೋಪಿಗಳ ಬಂಧನ

ಬಂಟ್ವಾಳ, ಜುಲೈ 23: ಕೇಪು ಗ್ರಾಮದ ಬೀಜದಡ್ಕ ಎಂಬಲ್ಲಿ ಅಲ್ಟೋ ಕಾರಿನಲ್ಲಿ ಅಕ್ರಮ ಗೋ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ.
ಜು. 22 ರಂದು ವಿಟ್ಲದ ಕೋಡಂದೂರು ರಸ್ತೆಯಲ್ಲಿ ಇಂದು ಬೆಳಗ್ಗೆ ಆಲ್ಟೋ ಕಾರಿನಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋಸಾಗಾಟ ಮಾಡುತ್ತಿದ್ದಾಗ ಹಿಂದು ಪರ ಸಂಘಟನೆಯ ಕಾರ್ಯಕರ್ತರು ತಡೆದು ನಿಲ್ಲಿಸಿದಾಗ ಆರೋಪಿಗಳು ಪರಾರಿಯಾಗಿದ್ದರು.

ಬಶೀರ್ (28) ಪಂಜರ ಕೋಡಿ ಮನೆ ಕೊಳ್ನಾಡು ಗ್ರಾಮ ಬಂಟ್ವಾಳ ತಾಲೂಕು, ನೌಫಾಲ್ (24) ಪಂಜರ ಕೋಡಿ ಮನೆ ಕೊಳ್ನಾಡು ಗ್ರಾಮ ಬಂಟ್ವಾಳ ತಾಲೂಕು ಬಂಧಿತ ಆರೋಪಿಗಳು. ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.