Connect with us

BANTWAL

ಬಂಟ್ವಾಳ: ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ

ಬಂಟ್ವಾಳ, ಮೇ08: ಬಂಟ್ವಾಳ ಗ್ರಾಮಾಂತರದ ಸರಪಾಡಿಯಲ್ಲಿ ಆಶಾ ಕಾರ್ಯಕರ್ತೆಯೊಬ್ಬರ ಮೇಲೆ ಹಲ್ಲೆಗೆ ಮುಂದಾದ ಘಟನೆ ವರದಿಯಾಗಿದೆ.

ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಸರಪಾಡಿಯಲ್ಲಿ ಆಶಾ ಕಾರ್ಯಕರ್ತೆಯೊಬ್ಬರು ಕರೋನಾ ಪಾಸಿಟಿವ್‌ ಬಂದ ಮನೆಯವರಲ್ಲಿ ಕರೋನಾ ಪಾಸಿಟಿವ್‌ ಬಂದ ವ್ಯಕ್ತಿಯ ಆರೋಗ್ಯ ವಿಚಾರಿಸಿಕೊಂಡು ಅವರಿಗೆ ಹೊರಗೆ ತಿರುಗಾಡದಂತೆ ತಿಳಿಸಿದ್ದಾರೆ.

ಬರುತ್ತಿರುವಾಗ ದಾರಿ ಮಧ್ಯೆ ಸೋಂಕಿತೆ ಸಂಬಂಧಿಕರಾದ ಸರಪಾಡಿಯ ಸಂದೀಪ್‌ ಮತ್ತು ಸಂತೋಷ ಎಂಬ ವ್ಯಕ್ತಿಗಳು ನನ್ನ ಅತ್ತೆಗೆ ಕರೋನ ಟೆಸ್ಟ್‌ ಮಾಡಿಸಿ ಪಾಸಿಟಿವ್‌ ಬರಿಸಿದ್ದೇ ನೀನು, ನಿನಗೆ ಪಾಸಿಟಿವ್‌ ಬರಿಸಿದರೆ ಬಾರಿ ಹಣ ಬರುತ್ತದೆ ಎಂದು ಹೇಳಿ, ಅವರ ಮೇಲೆ ಹಲ್ಲೆ ಮಾಡಲು ಮುಂದಾಗಿ ಕೊಲೆ ಬೆದರಿಕೆ ಹಾಕಿದ್ದಾರೆ.

ಆರೋಪಿಗಳ ವಿರುದ್ದ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಐ.ಪಿ.ಸಿ ಕಲಂ 354, 506, 269, 270 ಮತ್ತು ಕಲಂ 5 [1] ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020 ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿರುತ್ತಾರೆ.