ಬಂಟ್ವಾಳ ಜನವರಿ 15: ಎರಡು ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಬೈಕ್ ನಲ್ಲಿ ಬಾಲಕಿಯೊಬ್ಬಳು ಸಾವನಪ್ಪಿದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ.


ಮೃತ ಬಾಲಕಿಯನ್ನು ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ (13) ಎಂದು ಗುರುತಿಸಲಾಗಿದೆ. ಬೈಕ್ ಸವಾರ ಬಾಲಕಿಯ ತಂದೆ ಅಬ್ದುಲ್ ರಹ್ಮಾನ್‌ ಅವರು ಗಾಯಗೊಂಡಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಬಂದ ನೆತ್ತರಕೆರೆ ನಿವಾಸಿ ರಂಜಿತ್ ಎಂಬಾತ ಬಿ.ಸಿ.ರೋಡ್ ಕಡೆಯಿಂದ ತುಂಬೆ ಕಡೆಗೆ ಹೋಗುತ್ತಿದ್ದ ಬೈಕ್ ಗೆ ಢಿಕ್ಕಿ ಹೊಡೆದಿದ್ದಾನೆ ಎಂದು ತಿಳಿದುಬಂದಿದೆ. ಅಪಘಾತ ನಡೆದ ರಭಸಕ್ಕೆ ಬೈಕ್ ಸಂಪೂರ್ಣ ‌ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share Information