Connect with us

    BANTWAL

    ಬಂಟ್ವಾಳ – ಬೈಕ್ ಮತ್ತು ರಿಕ್ಷಾ ನಡುವೆ ಡಿಕ್ಕಿ – ಮೂವರಿಗೆ ಗಂಭೀರಗಾಯ

    ಬಂಟ್ವಾಳ ಮೇ 30: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಭಂಡಾರಿ ಬೆಟ್ಟು ಎಂಬಲ್ಲಿ ನಡೆದಿದೆ.  ರಿಕ್ಷಾ ಚಾಲಕ ಬಂಟ್ವಾಳ ನಾವೂರ ನಿವಾಸಿ ತಾರನಾಥ, ರಿಕ್ಷಾ ಪ್ರಯಾಣಿಕ ಶಂಕರ ಹಾಗೂ ಬೈಕ್ ಸವಾರ, ಉಜಿರೆ ನಿವಾಸಿ ಜೊಸ್ಟಿಲಿನ್ ಡಿ.ಸೋಜ, ಸಹ ಸವಾರ ರಶ್ಮಿತ್ ನಾಲ್ವರು ಗಾಯಗೊಂಡವರು.


    ಮಂಗಳವಾರ ಮಧ್ಯಾಹ್ನ ಬೈಕ್ ಸವಾರ ಬೆಳ್ತಂಗಡಿ ಕಡೆಯಿಂದ ಬರುತ್ತಿದ್ದ ವೇಳೆ ಆಟೋ ರಿಕ್ಷಾ ಭಂಡಾರಿಬೆಟ್ಟು ಎಂಬಲ್ಲಿ ಬಿಸಿರೋಡಿನಿಂದ ಬಂಟ್ವಾಳ ಕಡೆಗೆ ಹೋಗುವ ಸಂದರ್ಭ ಎರಡು ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ.
    ಢಿಕ್ಕಿಯಾದ ರಭಸಕ್ಕೆ ರಿಕ್ಷಾ ಹಾಗೂ ಬೈಕ್ ಎರಡು ವಾಹನಗಳು ಜಖಂಗೊಂಡಿದೆ ಹಾಗೂ ಎರಡು ವಾಹನಗಳ ಚಾಲಕರಿಗೆ ಗಂಭೀರವಾದ ಗಾಯವಾಗಿದ್ದು, ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply