BANTWAL
ಬಂಟ್ವಾಳ – ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು…!!

ಬಂಟ್ವಾಳ ಮಾರ್ಚ್ 08: ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ನ್ಯಾನೊ ಕಾರೊಂದು ಡಿಕ್ಕಿ ಹೊಡೆದ ಘಟನೆ ಬಂಟ್ವಾಳದ ಮಿತ್ತೂರು ಎಂಬಲ್ಲಿ ನಡೆದಿದೆ. ಈ ಅಪಘಾತದಲ್ಲಿ ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿವೆ.
ಮಂಗಳೂರಿನಿಂದ ಪುತ್ತೂರಿಗೆ ಅತೀ ವೇಗದಿಂದ ಬರುತ್ತಿದ್ದ ನ್ಯಾನೋ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಚಾಲಕನಿಗೆ ಗಂಭೀರಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಕಾರು ಚಾಲಕನನ್ನು ಈಶ್ವರಮಂಗಲ ನಿವಾಸಿ ಎಂದು ತಿಳಿದು ಬಂದಿದೆ.
