BANTWAL
ಬಂಟ್ವಾಳ – ಫ್ಯಾನ್ ರಿಪೇರಿ ವೇಳೆ ಕರೆಂಟ್ ಶಾಕ್ ವ್ಯಕ್ತಿ ಸಾವು
![](https://i0.wp.com/themangaloremirror.in/wp-content/uploads/2024/04/For-Advertisement-Please-Contact-1.jpg?fit=728%2C90&ssl=1)
ಬಂಟ್ವಾಳ ಫೆಬ್ರವರಿ 08: ಮನೆಯಲ್ಲಿ ಫ್ಯಾನ್ ರಿಪೇರಿ ಮಾಡುವ ವೇಳೆ ಕರೆಂಟ್ ಶಾಕ್ ಹೊಡೆದು ವ್ಯಕ್ತಿಯೊಬ್ಬರು ಸಾವನಪ್ಪಿದ ಘಟನೆ ಫೆಬ್ರವರಿ 7 ರ ಶುಕ್ರವಾರ ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಈ ಘಟನೆ ನಡೆದಿದೆ.
ಅರಳ ನಿವಾಸಿ ಭವಾನಿಶಂಕರ ಯಾನೆ ರಾಜೇಶ್ ಮೃತಪಟ್ಟ ವ್ಯಕ್ತಿ. ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ರಾಜೇಶ್ ನ ತಂಗಿ ಮನೆಯಲ್ಲಿ ಪ್ಯಾನ್ ರಿಪೇರಿ ಮಾಡುತ್ತಿದ್ದ ವೇಳೆ ಕರೆಂಟ್ ಶಾಕ್ ಹೊಡೆದು ಬಿದ್ದಿದ್ದರು. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)