Connect with us

    BANTWAL

    ಬಂಟ್ವಾಳ ಗುಡ್ಡ ಕುಸಿತದ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ

    ಬಂಟ್ವಾಳ, ಜುಲೈ 7: ಬಂಟ್ವಾಳದಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದು ಮಹಿಳೆಯೊಬ್ಬರು ಮೃತಪಟ್ಟ ಸ್ಥಳಕ್ಕೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೆ ಮೃತಪಟ್ಟ ಝರೀನಾರ ಕುಟುಂಬಕ್ಕೆ ಐದು ಲಕ್ಷ ರೂ. ಪರಿಹಾರ ಮತ್ತು ಮನೆ ದುರಸ್ತಿಗೆ 1.20 ಲಕ್ಷ ರೂ. ಪರಿಹಾರವನ್ನು ಸರಕಾರದಿಂದ ನೀಡಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.


    ಸಜಿಪ ಮುನ್ನೂರು ಗ್ರಾಮದ ನಂದಾವರದ ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮತ್ತೆ ಇಂತಹ ದುರ್ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲು ತಾಲೂಕಿನ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

    ನಂದಾವರ ಗುಂಪು ಮನೆ ಎಂಬಲ್ಲಿ ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಮನೆ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ ಮುಹಮ್ಮದ್ ಎಂಬವರ ಪತ್ನಿ ಝರೀನಾ(47) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರು ಪುತ್ರಿ ಸಫಾ(20) ಅವರನ್ನು ರಕ್ಷಿಸಲಾಗಿದೆ. ಅವಘಡದಲ್ಲಿ ಮನೆಗೆ ಭಾಗಶಃ ಹಾನಿ ಸಂಭವಿಸಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *