BANTWAL
ಬಂಟ್ವಾಳ – ಹಾಸಿಗೆ ತಯಾರಿಕಾ ಘಟಕ್ಕೆ ಬೆಂಕಿ – ಲಕ್ಷಾಂತರ ನಷ್ಟ

ಬಂಟ್ವಾಳ ಜುಲೈ 12 : ತಲೆದಿಂಬು ಹಾಗೂ ಹಾಸಿಗೆ ತಯಾರಿಸುವ ಘಟಕ್ಕೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಘಟಕ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಸಜೀಪ ಗ್ರಾಮದ ಆಲಾಡಿ ಸಮೀಪದ ಮುಂಡಕೋಡಿ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಸಜೀಪ ನಿವಾಸಿ ಲತೀಫ್ ಎಂಬವರಿಗೆ ಸೇರಿದ ಪ್ಯಾಕ್ಟರಿ ಇದಾಗಿದೆ. ಪ್ಯಾಕ್ಟರಿಯೊಳಗೆ ಲಕ್ಷಾಂತರ ರೂ.ಮೌಲ್ಯದ ಮೆಷಿನರಿಗಳು ಇದೆ ಎಂದು ಹೇಳಲಾಗಿದ್ದು, ಜೊತೆ ಲಕ್ಷಾಂತರ ರೂ ಗಳ ತಲೆದಿಂಬು ಹಾಗೂ ಹಾಸಿಗೆಗಳು ದಸ್ತಾನು ಇದ್ದವು.

ಸದ್ಯ ದಾಸ್ತಾನು ಕೊಠಡಿಗೆ ಬೆಂಕಿ ಹಚ್ಚಿಕೊಂಡಿದೆಯಾದರೂ ದೊಡ್ಡ ಮಟ್ಟದಲ್ಲಿ ಬೆಂಕಿಗೆ ಆಹುತಿಯಾಗುವುದನ್ನು ನೀರು ಹಾಯಿಸಿ ತಡೆಯಲಾಗಿದೆ. ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದು , ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.