Connect with us

BANTWAL

ಪ್ರಚೋದನಕಾರಿ ಭಾಷಣ – ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ಎಫ್ಐಆರ್

ಬಂಟ್ವಾಳ ಜೂನ್ 02: ಬಂಟ್ವಾಳದಲ್ಲಿ ನಡೆದ ಸುಹಾಸ್ ಶೆಟ್ಟಿ ಶೃದ್ದಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದಾರೆ ಎಂಬ ಆರೋಪದ ಮೇಲೆ ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ಪ್ರಕರಣ ದಾಖಲಾಗಿದೆ.

ಮೇ 12 ರಂದು ಸುಹಾಸ್ ಶೆಟ್ಟಿ ಶೃದ್ದಾಂಜಲಿ ಕಾರ್ಯಕ್ರಮ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಹಾಲ್ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ರವರು ಭಾಗವಹಿಸಿದ್ದು, ಅಲ್ಲಿ ನೆರೆದಿದ್ದ ಸುಮಾರು 500 ಜನರನ್ನುದ್ದೇಶಿಸಿ ಭಾಷಣ ಮಾಡುವ ವೇಳೆ, ಸಮಾಜದ ಸ್ವಾಸ್ತ್ಯ ಕೆಡುವಂತೆ, ಮತಿಯ ಗುಂಪುಗಳ ನಡುವೆ ವೈಮನಸ್ಸುಂಟು ಮಾಡುವಂತೆ, ಪ್ರಚೋದನಾತ್ಮಕವಾಗಿ ಹೇಳಿಕೆಯನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಹಿನ್ನಲೆ ಬಂಟ್ವಾಳ ಗ್ರಾಮಾಂತರ ಪೊಲೀಸರು 02.06.2025 ರಂದು ಅಕ್ರ ನಂಬ್ರ : 60/2025, ಕಲಂ: 353(2) BNS ರಂತೆ ಪ್ರಕರಣ ದಾಖಲಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *