BANTWAL
ಬಂಟ್ವಾಳ : ಫ್ರಿಡ್ಜ್ ರಿಪೇರಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಬಂಟ್ವಾಳ ಮಾರ್ಚ್ 05:ಫ್ರಿಡ್ಜ್ ರಿಪೇರಿ ಮಾಡುವ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ ಘಚನೆ ಪಾಣೆಮಂಗಳೂರು ಗ್ರಾಮದ ಮೆಲ್ಕಾರ್ ಸಮೀಪದ ಗುಡ್ಡೆಅಂಗಡಿಯಲ್ಲಿ ನಡೆದಿದೆ.
ಬಿ.ಸಿ.ರೋಡು-ಪರ್ಲಿಯಾ ನಿವಾಸಿ ಫಾರೂಕ್ ಎಂಬವರಿಗೆ ಸೇರಿದ ಅಂಗಡಿಯಲ್ಲಿ ಈ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿ ಹೊತ್ತಿಕೊಂಡ ಬಗ್ಗೆ ತಿಳಿದು ಬರುತ್ತಲೇ ಸ್ಥಳಕ್ಕಾಗಮಿಸಿದ ಸ್ಥಳೀಯರು ಬೆಂಕಿ ನಂದಿಸುವ ಪ್ರಯತ್ನ ನಡೆಸಿದ್ದಾರೆ. ಬಳಿಕ ಸ್ಥಳಕ್ಕಾಗಮಿಸಿದ ಬಂಟ್ವಾಳ ಅಗ್ನಿಶಾಮಕ ಸಿಬ್ಬಂದಿ ಪೂರ್ಣವಾಗಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
You must be logged in to post a comment Login