BANTWAL
ಬಂಟ್ವಾಳ – ಗೋಣಿ ಚೀಲ ಗೋಡೌನ್ ಗೆ ಬೆಂಕಿ – ಅಕ್ಕಪಕ್ಕದ ಮನೆಗಳಿಗೂ ಹಬ್ಬಿದ ಬೆಂಕಿ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact-1.jpg?fit=728%2C90&ssl=1)
ಬಂಟ್ವಾಳ ಫೆಬ್ರವರಿ 11: ಗೋಣಿ ಚೀಲ ದಾಸ್ತಾನಿದ್ದ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಸೋಮವಾರ ಮಧ್ಯರಾತ್ರಿ ತಾಲೂಕಿನ ಬಡಕಬೈಲ್ ಎಂಬಲ್ಲಿ ನಡೆದಿದೆ.
ಮಹಮ್ಮದ್ ಯಾನೆ ಮೋನಾಕ ಅವರಿಗೆ ಸೇರಿದ್ದ ಗೋಣಿ ಚೀಲದ ಗೋದಾಮ್ ಇದಾಗಿದ್ದು, ಆಕಸ್ಮಿಕವಾಗಿ ಬೆಂಕಿ ತಗುಲಿದೆ ಎಂದು ಹೇಳಲಾಗಿದೆ. ಗೋದಾಮು ಸಂಪೂರ್ಣ ಸುಟ್ಟು ಹೋಗಿದ್ದು, ಪಕ್ಕದ ಹಮೀದ್ ಹಾಗೂ ಸರ್ಪುದ್ದೀನ್ ಎಂಬವರ ಮನೆಗೂ ಬೆಂಕಿ ತಗುಲಿದೆ. ಯಾವುದೇ ಸಾವು-ನೋವು ಸಂಭವಿಸಿಲ್ಲ. ತಡರಾತ್ರಿ ಘಟನೆ ಈ ಘಟನೆ ನಡೆದಿದ್ದು ಬೆಂಕಿ ನಂದಿಸಲು ಅಗ್ನಿ ಶಾಮಕದಳ ಹಾಗೂ ಸಾರ್ವಜನಿಕರು ಹರಸಾಹಸ ಪಡಬೇಕಾಯಿತು. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಘಟನೆ ಗೆ ಕಾರಣ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಭೇಟಿ ನೀಡಿದ್ದಾರೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)