Connect with us

    BANTWAL

    ಬಂಟ್ವಾಳ – ಆಕಸ್ಮಿಕವಾಗಿ ಮನೆಗೆ ಬೆಂಕಿ..ಲಕ್ಷಾಂತರ ಮೌಲ್ಯದ ಸೊತ್ತು ಬೆಂಕಿಗಾಹುತಿ

    ಬಂಟ್ವಾಳ ಡಿಸೆಂಬರ್ 17: ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾದ ಘಟನೆ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಎಂಬಲ್ಲಿ ನಡೆದಿದೆ.


    ಇಲ್ಲಿನ ದೇವಂದಬೆಟ್ಟು ನಿವಾಸಿಯಾಗಿರುವ ಸುಂದರಿ, ಶುಭ ಆನಂದ ಬಂಜನ್ ಎಂಬವರಿಗೆ ಸೇರಿರುವ ಮನೆಗೆ ನಿನ್ನೆ ರಾತ್ರಿ ಸುಮಾರು 10 .15 ರ ವೇಳೆಗೆ ಬೆಂಕಿ ಬಿದಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗಲಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಸುಮಾರು 6 ಲಕ್ಷಕ್ಕೂ ಅಧಿಕ ಪ್ರಮಾಣದಲ್ಲಿ ನಷ್ಟ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿ, ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply