BANTWAL
ಬಂಟ್ವಾಳ – ರಾತ್ರಿ ಪಾಳಿ ಕರ್ತವ್ಯದಲ್ಲಿದ್ದ ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿ ಕಚೇರಿಯಲ್ಲೇ ಕುಸಿದು ಬಿದ್ದು ಸಾವು
ಬಂಟ್ವಾಳ ನವೆಂಬರ್ 30: ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿಯೊಬ್ಬರು ಕರ್ತವ್ಯದಲ್ಲಿರುವಾಗಲೇ ಕಚೇರಿಯಲ್ಲೇ ಕುಸಿದು ಬಿದ್ದು ಸಾವನಪ್ಪಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ.
ವೀರಕಂಬ ಮಜ್ಜೋನಿ ನಿವಾಸಿ ಜಯರಾಮ ಮೂಲ್ಯ (47) ಮೃತಪಟ್ಟ ಸಿಬ್ಬಂದಿ. ಅವರು ಸುಮಾರು 30 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ನವೆಂಬರ್ 29ರಂದು ರಾತ್ರಿ ಪಾಳಿಯಲ್ಲಿ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮುಂಬಾಗಿಲ ಚಿಲಕ ಹಾಕಿಕೊಂಡು ಕೋಣೆಯೊಳಗೆ ಮಲಗಲು ಹೋಗುವ ವೇಳೆ ಟೇಬಲ್ ಮೇಲೆ ಕುಸಿದು ಬಿದ್ದು ಹೃದಯಾಘಾತದಿಂದ ನಿಧನರಾಗಿರಬೇಕು ಎಂದು ಸಂಶಯ ವ್ಯಕ್ತಪಡಿಸಲಾಗಿದೆ. ಬೆಳಿಗ್ಗೆ ಸುಮಾರು 6.30 ವರೆಯವರೆಗೂ ಇಲಾಖೆಯ ಬಾಗಿಲು ಮುಚ್ಚಿಕೊಂಡಿದ್ದನ್ನು ಕಂಡು ಇಲಾಖೆಯ ಚಾಲಕ ಕಿಟಕಿ ಬಾಗಿಲು ತೆರದು ನೋಡಿದಾಗ ಜಯರಾಮ ಅವರು ಟೇಬಲ್ ಮೇಲೆ ಬಿದ್ದ ಸ್ಥಿತಿಯಲ್ಲಿರುವುದು ಕಂಡು ಬಂದಿದೆ.