BANTWAL
ಬಂಟ್ವಾಳ – ಕೆಎಸ್ ಆರ್ ಟಿಸಿ ಓವರ್ ಟೆಕ್ ಭರಕ್ಕೆ ಬೈಕ್ ಸವಾರನ ಧಾರುಣ ಸಾವು

ಬಂಟ್ವಾಳ ಮೇ 19: ಕೆಎಸ್ ಆರ್ ಟಿಸಿ ಬಸ್ ಓವರ್ ಟೆಕ್ ಮಾಡು ವೇಳೆ ಬೈಕ್ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನವೆ ಪಾಣೆಮಂಗಳೂರಿನ ನೆಹರೂನಗರದಲ್ಲಿ ಮೇ 18ರ ತಡರಾತ್ರಿ ಸಂಭವಿಸಿದೆ.
ಮೃತರನ್ನು ಮಂಗಳೂರು ನಿವಾಸಿ ಅಲಿಸ್ಟರ್ ಡಿಸೋಜ(24) ಮೃತ ದುರ್ದೈವಿ. ಅವರು ವಿಟ್ಲದಲ್ಲಿ ನಡೆದ ಗೃಹಪ್ರವೇಶದಲ್ಲಿ ಪಾಲ್ಗೊಂಡು ಮತ್ತೊಂದು ಬೈಕಿನಲ್ಲಿದ್ದ ಸ್ನೇಹಿತರೊಂದಿಗೆ ಮಂಗಳೂರಿಗೆ ಹಿಂದಿರುಗುತ್ತಿದ್ದ ವೇಳೆ ಈ ಅವಘಡ ನಡೆದಿದೆ. ಮಂಗಳೂರು ಭಾಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಅಂಬಾರಿ ಬಸ್ಸು ನೆಹರೂನಗರದಲ್ಲಿ ಟೆಂಪೊ ಟ್ರಾವೆಲರ್ ಅನ್ನು ಓವರ್ ಟೇಕ್ ಮಾಡುವ ಪ್ರಯತ್ನದಲ್ಲಿ ಸ್ಕೂಟರಿಗೆ ಢಿಕ್ಕಿ ಹೊಡೆದಿದೆ. ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
