BANTWAL
ಬಂಟ್ವಾಳ – ಪಲ್ಟಿಯಾದ ಗ್ಯಾಸ್ ಟ್ಯಾಂಕರ್
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಬಂಟ್ವಾಳ, ಮೇ 31: ಗ್ಯಾಸ್ ಟ್ಯಾಂಕರ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ
ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಕಡೆಗೋಳಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಮೇಲೆ ಉರುಳಿಬಿದ್ದಿದೆ. ಈ ವೇಳೆ ಯಾವುದೇ ಅನಿಲ ಸೋರಿಕೆ ಆಗಿಲ್ಲ ಎಂದು ತಿಳಿದುಬಂದಿದೆ. ಬಂಟ್ವಾಳ ಅಗ್ನಿಶಾಮಕ ದಳದವರು, ಸಂಚಾರ ಪೊಲೀಸರು, ಸ್ಥಳೀಯ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
You must be logged in to post a comment Login