Connect with us

    BANTWAL

    ಬಂಟ್ವಾಳ: ಕಮರಿಗೆ ಬಿದ್ದ ಕಾರು-ಮಗು ಪವಾಡಸದೃಶ ಪಾರು

    ಬಂಟ್ವಾಳ, ಜುಲೈ 13: ನಿಯಂತ್ರಣ ತಪ್ಪಿ ಕಾರೊಂದು ಆಳವಾದ ಕಮರಿಗೆ ಬಿದ್ದ ಘಟನೆ ಬಂಟ್ವಾಳದ ರಾಷ್ಟ್ರೀಯ ಹೆದ್ದಾರಿ ಅಂಚಿಕಟ್ಟೆ ಎಂಬಲ್ಲಿ ನಡೆದಿದೆ.

    ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿರುವ ಕಮರಿಗೆ ಉರುಳಿ ತಲೆಕೆಳಗಾಗಿ ಕಾರು ಬಿದ್ದಿದೆ. ಬೆಳ್ತಂಗಡಿ ತಾಲೂಕಿನ ಜಾರಿಗೆಬೈಲು ನಿವಾಸಿಗಳಾದ ಕಾರಿನ ಚಾಲಕ ಸಾಹಿಕ್, ಪ್ರಯಾಣಿಕರಾದ ಶಾಹಿನಾ ,ಪೌಜಿಯಾ ,ಸೌದ ಮತ್ತು 6 ತಿಂಗಳು ಮಗು ಪವಾಡಸದೃಶವಾಗಿ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

    ಸಂಬಂಧಿಕರೋರ್ವರು ಹುಷಾರಿಲ್ಲದ ಕಾರಣಕ್ಕಾಗಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಅವರ ಯೋಗ ಕ್ಷೇಮ ವಿಚಾರಿಸುವ ಸಲುವಾಗಿ ತೆರಳುವ ವೇಳೆ ಈ ಘಟನೆ ನಡೆದಿದೆ. ಸಣ್ಣಪುಟ್ಟ ಗಾಯಗೊಂಡ ಇವರು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.

    ರಾಷ್ಟ್ರೀಯ ಹೆದ್ದಾರಿ ಹಲವಾರು ತಿರುವುಗಳನ್ನು ಹೊಂದಿದ್ದು, ಕಳೆದ ಕೆಲ ದಿನಗಳಿಂದ ಸುರಿಯುವ ಮಳೆಗೆ ಹೆದ್ದಾರಿ ಪಕ್ಕದ ಗುಡ್ಡ ಜರಿದು , ರಸ್ತೆಗೆ ಮಣ್ಣು ಬಿದ್ದಿರುವ ಹಿನ್ನೆಲೆಯಲ್ಲಿ ರಸ್ತೆ ಜಾರುತ್ತಿದ್ದು ಅವಘಡ ಸಂಭವಿಸಿರಬೇಕು ಎನ್ನಲಾಗಿದೆ. ಮೆಲ್ಕಾರ್ ಟ್ರಾಫಿಕ್ ಎಸ್. ಐ.ಮೂರ್ತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply