BANTWAL
ಬಂಟ್ವಾಳದ ನೈತಿಕ ಪೊಲೀಸ್ ಗಿರಿ ಪ್ರಕರಣ – ಇಬ್ಬರ ಬಂಧನ
ಬಂಟ್ವಾಳದ ನೈತಿಕ ಪೊಲೀಸ್ ಗಿರಿ ಪ್ರಕರಣ – ಇಬ್ಬರ ಬಂಧನ
ಮಂಗಳೂರು ಜುಲೈ 30: ಬಂಟ್ವಾಳದಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣವನ್ನು ಗಂಭಿರವಾಗಿ ಪರಿಗಣಿಸಿರುವ ಬಂಟ್ವಾಳ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಬಂಟ್ವಾಳ ದ ಅಮ್ಮೆಮಾರ್ ಗ್ರಾಮದ ನಿವಾಸಿ ಮಹಮ್ಮದ್ ಅಶ್ರಫ್ (20) ಹಾಗು ಫರಂಗಿಪೇಟೆಯ ಉಮ್ಮರ್ ಫಾರೂಕ್ (25) ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ಬಂಟ್ವಾಳ ತಾಲೂಕಿನ ಫರಂಗಿಪೇಟೆಯಲ್ಲಿ ಈ ಘಟನೆ ನಡೆದಿದ್ದ ತಡವಾಗಿ ಬೆಳೆಕಿಗೆ ಬಂದಿತ್ತು.
ಉಡುಪಿ ಜಿಲ್ಲೆಯ ಸಾಲಿಗ್ರಾಮ ನಿವಾಸಿ ಸುರೇಶ ಎಂಬವರು ಬೋಟು ವ್ಯವಹಾರ ನಡೆಸುತ್ತಿದ್ದು, ಇದೇ ವ್ಯವಹಾರಕ್ಕೆ ಸಂಬಂಧಿಸಿದಂತೆ ಫರಂಗಿಪೇಟೆಗೆ ನಿನ್ನೆ ಸಂಜೆ ಬಂದಿದ್ದರು. ಅಲ್ಲಿ ಅವರಿಗೆ ಉಡುಪಿ ಮೂಲದ ಪರಿಚಯಸ್ತ ಮುಸ್ಲಿಂ ಮಹಿಳೆಯೊಬ್ಬರು ಸಿಕ್ಕಿದ್ದರು.
ಇದೇ ವೇಳೆ ಇವರಿಬ್ಬರು ಮಾತನಾಡುವುದನ್ನು ಕಂಡ ಸ್ಥಳೀಯ ಭಿನ್ನಕೋಮಿನ ಯುವಕರು ಫರಂಗಿಪೇಟೆ ಪೇಟೆಯಿಂದ ಅನ್ಯಕೋಮಿನ ಯುವಕ ತಮ್ಮ ಧರ್ಮದ ಯುವತಿಯನ್ನು ಕಾರಿನಲ್ಲಿ ಕುಳ್ಳಿರಿಸಿ ಕರೆದುಕೊಂಡು ಹೋಗಲು ಯತ್ನಿಸುತ್ತಿದ್ದಾನೆ ಎಂಬ ಗಾಳಿ ಸುದ್ದಿ ಹರಡಿದ ಹಿನ್ನೆಲೆಯಲ್ಲಿ ಯುವಕರ ಗುಂಪೋಂದು ಸ್ಥಳಕ್ಕೆ ಆಗಮಿಸಿ ಇಬ್ಬರ ಸುತ್ತುವರಿದು ತೀರ್ವ ಹಲ್ಲೆ ನಡೆಸಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಲಾಠಿ ಬೀಸಿ ಉದ್ರಿಕ್ತರನ್ನು ಚದುರಿಸಿದ್ದರು.