Connect with us

DAKSHINA KANNADA

ಬಂಟ್ವಾಳದಲ್ಲಿ ಯುವಕ ಬರ್ಬರ ಕೊಲೆ – ಅಪರಾಧಿಗಳನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಮಂಗಳೂರು ಮೇ 27: ಮಂಗಳೂರಿನ ಬಂಟ್ವಾಳದ ಕೊಳತ್ತಮಜಲು ಬಳಿ ಅಬ್ದುಲ್ ರಹಿಮಾನ್ ಎಂಬ ಯುವಕನ ಹತ್ಯೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಖಂಡನೆ ವ್ಯಕ್ತಪಡಿಸಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ DG &IGP ಹಾಗೂ ಕಾನೂನು ಸುವ್ಯವಸ್ಥೆ ADGP ಅವರಿಗೆ ದೂರವಾಣಿ ಮೂಲಕ ಮಾತನಾಡಿದ ಸಚಿವರು, ಸೂಕ್ತ ಬಿಗಿ ಕಾನೂನು ಕ್ರಮಗಳನ್ನ ಜರುಗಿಸುವಂತೆ ಸೂಚನೆ ನೀಡಿದರು.

ಅಲ್ಲದೇ ಮಂಗಳೂರು ಜಿಲ್ಲಾಧಿಕಾರಿ ಹಾಗೂ ಎಸ್.ಪಿ ಅವರೊಂದಿಗೆ ಮಾತನಾಡಿದ ಸಚಿವರು ಮಂಗಳೂರಿನಲ್ಲಿ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳುವಂತೆ ಸೂಚನೆ ನೀಡಿದರು. ಸೂಕ್ಷ್ಮ ಸ್ಥಳಗಳಲ್ಲಿ ಹೆಚ್ಚಿನ ನಿಗಾ ವಹಿಸಿ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.


ಈ ಕುರಿತಂತೆ ಟ್ವೀಟ್ ಮಾಡಿರುವ ಸಚಿವ ಮಂಗಳೂರಿನ ಬಂಟ್ವಾಳದ ಕೊಳತ್ತಮಜಲು ಬಳಿ ಅಬ್ದುಲ್ ರಹಿಮಾನ್ ಎಂಬ ಯುವಕನ ಹತ್ಯೆ ಖಂಡನೀಯ. ಘಟನೆ ಹಿನ್ನೆಲೆಯಲ್ಲಿ ನಾನು DG &IGP ಹಾಗೂ ಕಾನೂನು ಸುವ್ಯವಸ್ಥೆ ADGP ಅವರಿಗೆ ದೂರವಾಣಿ ಮೂಲಕ ಮಾತನಾಡಿದ್ದು, ಅಪರಾಧಿಗಳನ್ನು ಪತ್ತೆಹಚ್ವಿ, ಸೂಕ್ತ ಬಿಗಿ ಕಾನೂನು ಕ್ರಮಗಳನ್ನ ಜರುಗಿಸುವಂತೆ ಸೂಚನೆ ನೀಡಿದ್ದೇನೆ.

ಅಲ್ಲದೇ ಮಂಗಳೂರು ಜಿಲ್ಲಾಧಿಕಾರಿ ಹಾಗೂ ಎಸ್.ಪಿ ಅವರೊಂದಿಗೂ ಮಾತನಾಡಿ, ಮಂಗಳೂರಿನಲ್ಲಿ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳುವಂತೆ ಸೂಚಿಸಿದ್ದೇನೆ. ಸೂಕ್ಷ್ಮ ಸ್ಥಳಗಳಲ್ಲಿ ಹೆಚ್ಚಿನ ನಿಗಾ ವಹಿಸಿ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಜರುಗಿಸಲು ಸೂಚಿಸಲಾಗಿದೆ ಎಂದಿದ್ದಾರೆ.

ಮಂಗಳೂರಿನ ಕೊಳತ್ತಮಜಲು ಬಳಿ ಅಬ್ದುಲ್ ರಹಿಮಾನ್ ಎಂಬ ವ್ಯಕ್ತಿಯ ಹತ್ಯೆ ಖಂಡನೀಯ. ಘಟನೆಗೆ ನೈಜ ಕಾರಣ ತಿಳಿದಿಲ್ಲ. ಈ ಸಂಬಂಧ ಈಗಾಗಲೇ ಗೃಹ ಸಚಿವರು  ಹಾಗೂ ಕಾನೂನು ಸುವ್ಯವಸ್ಥೆ ADGP ಜೊತೆ ಮಾತಾಡಿದ್ದೇನೆ. ದ.ಕನ್ನಡ ಜಿಲ್ಲೆಯ ಶಾಂತಿ ಹಾಳು ಮಾಡುವ ದುಷ್ಟ ಯತ್ನವೊಂದು ವ್ಯವಸ್ಥಿತವಾಗಿ ನಡೆಯುತ್ತಿದೆ. ಈ ಘಟನೆಯು ಇದರ ಒಂದು ಭಾಗದಂತೆ ಕಾಣಿಸುತ್ತಿದೆ. ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತಕ್ಕೆ ಕಠಿಣ ಸೂಚನೆ ನೀಡಿದ್ದೇನೆ‌. ಜನರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡುತ್ತೇನೆ‌.

 

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *