LATEST NEWS
ಬಂಟ್ವಾಳ ರಹೀಮ್ ಕೊ*ಲೆ ಪ್ರಕರಣ – ಆಸ್ಪತ್ರೆ ಮುಂದೆ ಜಮಾಯಿಸಿದ ಜನ – ಭಾರೀ ಆಕ್ರೋಶ

ಮಂಗಳೂರು ಮೇ 27: ಬಂಟ್ವಾಳದಲ್ಲಿ ನಡೆದ ಯುವಕ ರಹೀಂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಮೃತದೇಹ ಇರುವ ಮಂಗಳೂರಿನ ಖಾಸಗಿ ಆಸ್ಪತ್ರೆ ಮುಂಭಾಗ ಭಾರೀ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಚೋದನಕಾರಿಯಾದಗಿ ಭಾಷಣ ಮಾಡಿದವರನ್ನು ಅರೆಸ್ಟ್ ಮಾಡಿದರೆ ಈ ರೀತಿ ಅಮಾಯಕರ ಕೊಲೆಯನ್ನು ತಪ್ಪಿಸಬಹುದಿತ್ತು ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ಮಂಗಳವಾರ (ಮೇ 27) ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು. ಪರಿಣಾಮ ಕೊಳತ್ತಮಜಲು ನಿವಾಸಿ ರಹೀಮ್ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಾಯಾಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನು ಅಬ್ದುಲ್ ರಹೀಮ್ ಮೃತದೇಹ ಮಂಗಳೂರಿನ ದೇರಳಕಟ್ಟೆ ಯೆನಪೋಯ ಆಸ್ಪತ್ರೆಯ ಶವಾಗಾರದಲ್ಲಿದೆ. ಈ ವಿಚಾರ ತಿಳಿದು ಶವಗಾರದ ಬಳಿ ನೂರಾರು ಜನ ಮುಸ್ಲಿಮರು ಜಮಾಯಿಸಿದ್ದಾರೆ. ಕೆಲ ಯುವಕರು ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹ ಸಮಿತಿ ಅಧ್ಯಕ್ಷ ನಾಸಿರ್ ಲಕ್ಕಿ ಸ್ಟಾರ್ ಸೇರಿದಂತೆ ಕೆಲ ಮುಸ್ಲಿಂ ಮುಖಂಡರನ್ನು ಸುತ್ತುವರಿದು ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರಚೋದನಕಾರಿ ಭಾಷಣ ಮಾಡಿದವರನ್ನು ಬಂಧಿಸುವಂತೆ ಪೊಲೀಸರಿಗೆ ಒತ್ತಾಯಿಸಿದ್ದಾರೆ.