Connect with us

    LATEST NEWS

    ತುಂಬೆ: ಮರಕ್ಕೆ ಡಿಕ್ಕಿ ಹೊಡೆದ ಪಿಕಪ್ ವಾಹನ – ಇಬ್ಬರು ಯುವಕರ ದುರ್ಮರಣ

    ಬಂಟ್ವಾಳ ನವೆಂಬರ್ 14: ಸಮಾರಂಭಕ್ಕೆ ಕ್ಯಾಟರಿಂಗ್ ಆಹಾರ ಸರಬರಾಜು ಮಾಡುತ್ತಿದ್ದ ಪಿಕಪ್ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸಾವನಪ್ಪಿರುವ ಘಟನೆ ಬ್ರಹ್ಮರಕೂಟ್ಟು ಸಮೀಪ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ.


    ಮೃತರನ್ನು ಉಪ್ಪಿನಂಗಡಿ ನಿವಾಸಿಗಳಾದ ಚೇತನ್ (25) ಮತ್ತು ಆಶೀತ್ (21) ಎಂದು ಗುರುತಿಸಲಾಗಿದ್ದು, ಸಿಂಚನ್ ಮತ್ತು ಸುದೀಪ್ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.


    ಕ್ಯಾಟರಿಂಗ್ ಕೆಲಸವನ್ನು ಮುಗಿಸಿ ಮಂಗಳೂರು ಕಡೆಯಿಂದ ಆಗಮಿಸುತ್ತಿದ್ದ ಪಿಕ್‌ಅಪ್ ಮರಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡವರನ್ನು ತುಂಬೆ ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ, ಇಬ್ಬರು ಅದಾಗಲೇ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲರೂ ಪಿಕ್‌ಅಪ್ ನ ಹಿಂಬದಿಯಲ್ಲಿದ್ದರು ಎನ್ನಲಾಗಿದೆ. ಬಂಟ್ವಾಳ ಸಂಚಾರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply