Connect with us

    BANTWAL

    ಬಂಟ್ವಾಳ : ತುಂಬೆ ಬಳಿ ಬೈಕಿಗೆ ಖಾಸಗಿ‌ ಬಸ್ ಡಿಕ್ಕಿ, ಓರ್ವ ಮೃತ್ಯು ಮತ್ತೋರ್ವ ಗಂಭೀರ..!

    ಬಂಟ್ವಾಳ :  ಬೈಕಿಗೆ ಖಾಸಗಿ‌ ಬಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ  ಸಾವನ್ನಪ್ಪಿದ್ದು ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತುಂಬೆ ಸಮೀಪ ಕಡೆಗೋಳಿ ಎಂಬಲ್ಲಿ  ಭಾನುವಾರ ರಾತ್ರಿ ಸಂಭವಿಸಿದೆ.

    ರಾಷ್ಟ್ರೀಯ ಹೆದ್ದಾರಿ ಮಂಗಳೂರು ‌ಬೆಂಗಳೂರು ರಸ್ತೆಯ ತುಂಬೆ ಸಮೀಪದ ‌ಕಡೆಗೋಳಿ ಎಂಬಲ್ಲಿ ಮಂಗಳೂರಿನಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಸೆಲೀನಾ ಎಂಬ ಖಾಸಗಿ ಬಸ್ ಬೈಕ್ ಸವಾರರಿಬ್ಬರಿಗೆ ಡಿಕ್ಕಿಯಾಗಿದೆ.  ಗಾಯಗೊಂಡವನನ್ನು  ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಸ್ಥಿತಿ  ಗಂಭೀರ ವಾಗಿದೆ ಎನ್ನಲಾಗಿದೆ.

    ಕಡೆಗೋಳಿ ನಿವಾಸಿ ಪ್ರವೀಣ (30) ಸ್ಥಳದಲ್ಲಿಯೇ ಮೃತಪಟ್ಟ ವ್ಯಕ್ಯಿಯಾಗಿದ್ದು, ಸ್ನೇಹಿತ ಸಂದೀಪ ಗಂಭೀರವಾಗಿ ಗಾಯಗೊಂಡವರಾಗಿದ್ದಾರೆ. ಇಬ್ಬರು ಸೇಲ್ಸ್ ಮ್ಯಾನ್ ಕೆಲಸಗಾರರಾಗಿದ್ದು, ತನ್ನ ಖಾಸಗಿ ಕೆಲಸವನ್ನು ಮುಗಿಸಿ ಮನೆಗೆ ಜೊತೆಯಾಗಿ ಪ್ರಯಾಣಿಸುತ್ತಿದ್ದ ವೇಳೆ ಬಸ್ ಡಿಕ್ಕಿ ಹೊಡೆದಿದೆ.  ಬಸ್ ಚಾಲಕನ ವಿರುದ್ಧ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಇತ್ತೀಚಿನ ವರ್ಷಗಳಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ ಗಳ ಅತಿವೇಗದ ಚಾಲನೆ, ಕರ್ಕಶ ಹಾರ್ನ್‌ಗಳು  ಸಣ್ಣ ವಾಹನ ಸವಾರರನ್ನು ಗಲಿಬಿಲಿ ಮಾಡಿಸುತ್ತವೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು  ಈ ಬಗ್ಗೆ ಪೊಲೀಸ್ ಇಲಾಖೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *