LATEST NEWS
ಬಂಟ್ವಾಳ ಅಬ್ದುಲ್ ರಹೀಂ ಬರ್ಬರ ಹ*ತ್ಯೆ ಖಂಡಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ

ಮಂಗಳೂರು ಮೇ 27 : ಬಂಟ್ವಾಳ ಅಬ್ದುಲ್ ರಹೀಂ ಬರ್ಬರ ಹತ್ಯೆ ಖಂಡಿಸಿ ಮಂಗಳೂರು ಹೊರವಲಯದ ದೇರಳಕಟ್ಟೆಯಲ್ಲಿ ರಸ್ತೆ ನಡೆಸಿ ಪ್ರತಿಭಟನೆ ನಡೆಸಲಾಗಿದೆ.
ಬಂಟ್ವಾಳ ಗ್ರಾಮಾಂತರ ಠಾಣೆಯ ವ್ಯಾಪ್ತಿ ಇರಾಕೋಡಿ ಎಂಬಲ್ಲಿ ಹತ್ಯೆಯಾದ ಅಬ್ದುಲ್ ರಹೀಂ ಮೃತದೇಹವನ್ನು ದೇರಳಕಟ್ಟೆಯ ಯೇನೆಪೋಯ ಆಸ್ಪತ್ರೆಗೆ ತರಲಾಗಿದೆ. ಆಸ್ಪತ್ರೆಯ ಬಳಿ ಮುಸ್ಲಿಂ ಯುವಕರು ಭಾರಿ ಸಂಖ್ಯೆಯಲ್ಲಿ ಜಮಾಯಿಸಿದ್ದು, ಬಿಗು ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. ಈ ನಡುವೆ ಬಂಟ್ವಾಳ ಅಬ್ದುಲ್ ರಹೀಂ ಬರ್ಬರ ಹತ್ಯೆ ಪ್ರಕರಣ ಖಂಡಿಸಿ ಅಬ್ದುಲ್ ರಹೀಂ ಹತ್ಯೆಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಕೆಲ ಯುವಕರು ರಸ್ತೆ ತಡೆಸಿ ಪ್ರತಿಭಟನೆ ನಡೆಸಿದ್ದಾರೆ.

ಇನ್ನು ಬಂಟ್ವಾಳ ತಾಲೂಕಿನ ಇರಾಕೋಡಿ ಎಂಬಲ್ಲಿ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಗೊಳಿಸಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಆದೇಶಿಸಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಮೇ 27 ರಿಂದ ಮೇ 30 ರವರೆಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ರಾತ್ರಿಯಾಗುತ್ತಿದ್ದಂತೆ ಮಂಗಳೂರಿನಾದ್ಯಂತ ಪೊಲೀಸರನ್ನು ನಿಯೋಜಿಸಿದ್ದು ಅಂಗಡಿ ಬಂದ್ ಮಾಡಿಸಿದ್ದಾರೆ.