LATEST NEWS
ಬಂಟ್ವಾಳ ಅಬ್ದುಲ್ ರಹೀಂ ಹತ್ಯೆ ಪ್ರಕರಣ – ಮೂವರು ಪೊಲೀಸರ ವಶಕ್ಕೆ…!!

ಮಂಗಳೂರು ಮೇ 28: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಇರಾಕೋಡಿ ಎಂಬಲ್ಲಿ ಕೊಳತ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ, ಪಿಕಪ್ ಚಾಲಕ ಅಬ್ದುಲ್ ರಹೀಂ ( 32) ಹತ್ಯೆ ಮತ್ತು ಕಲಂದರ್ ಶಾಫಿ ಮೇಲಿನ ಕೊಲೆಯತ್ನ ಪ್ರಕರಣ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.
ಅಬ್ದುಲ್ ರಹಿಮಾನ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಇಬ್ಬರು ಸೇರಿ 15 ಮಂದಿಯ ವಿರುದ್ಧ ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಕೃತ್ಯದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಮಾಹಿತಿ ಇದೆ.
