BANTWAL
ಬಂಟ್ವಾಳ – ರಹಿಮಾನ್ ಹತ್ಯೆ ಪ್ರಕರಣ ಮತ್ತೆ ಇಬ್ಬರು ಆರೋಪಿಗಳು ಅರೆಸ್ಟ್

ಬಂಟ್ವಾಳ ಜೂನ್ 03: ಬಂಟ್ವಾಳ ಇರಾಕೋಡಿಯಲ್ಲಿ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ತೆಂಕಬೆಳ್ಳೂರು ನಿವಾಸಿ ಅಭಿನ್ ರೈ (32) ಹಾಗೂ ಬಡಗಬೆಳ್ಳೂರು ನಿವಾಸಿ ತೇಜಾಕ್ಷ(24) ಎಂದು ಗುರುತಿಸಲಾಗಿದೆ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಇದರೊಂದಿಗೆ ಬಂಧಿತರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.

ಈ ಪ್ರಕರಣ ಸಂಬಂಧ ಬಂಟ್ವಾಳ ತಾಲ್ಲೂಕಿನ ಕುರಿಯಾಳ ಗ್ರಾಮದ ಮುಂಡರಕೋಡಿ ಮನೆಯ ದೀಪಕ್ (21), ಅಮ್ಮುಂಜೆ ಗ್ರಾಮದ ಶಿವಾಜಿ ನಗರ ಭದ್ರಕಾಳಿ ದೇವಸ್ಥಾನ ಬಳಿಯ ನಿವಾಸಿ ಪೃಥ್ವಿರಾಜ್ (21) ಹಾಗೂ ಬಂಟ್ವಾಳದ ನಿವಾಸಿ ಚಿಂತನ್ (19), ತೆಂಕಬೆಳ್ಳೂರು ಗ್ರಾಮದ ಸುಮಿತ್ ಅಚಾರ್ಯ (27) ಹಾಗೂ ಬಡಗಬೆಳ್ಳೂರು ಗ್ರಾಮದ ರವಿರಾಜ್ (23) ಎಂಬುವರನ್ನು ಪೊಲಿಸರು ಈಗಾಗಲೇ ಬಂಧಿಸಿದ್ದಾರೆ.
ಕೊಳತ್ತಮಜಲು ನಿವಾಸಿ ಅಬ್ದುಲ್ ರಹಿಮಾನ್ ಅವರನ್ನು ಇರಾಕೋಡಿಯಲ್ಲಿ ಮೇ 27ರಂದು ಹತ್ಯೆ ಮಾಡಲಾಗಿತ್ತು. ಅವರ ಜೊತೆಗಿದ್ದ ಕಲಂದರ್ ಶಾಫಿ ಎಂಬವರ ಮೇಲೆ ಹಲ್ಲೆ ನಡೆಸಲಾಗಿತ್ತು. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.