Connect with us

    BANTWAL

    ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಮಾತೃವಿಯೋಗ

    ಬಂಟ್ವಾಳ ಅಕ್ಟೋಬರ್ 11: ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಅವರ ತಾಯಿ ಅಲ್ಪಕಾಲಕ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು.


    ಪೊಳಲಿ ದೇವಸ್ಥಾನದ ಆಡಳಿತದ ಒಂದು ಮನೆತನವಾದ ಉಳಿಪ್ಪಾಡಿಗುತ್ತು ದಿ| ರಮೇಶ್ ನಾಯ್ಕ್ ಅವರ ಪತ್ನಿ ಸರೋಜಿನಿ ಅವರು ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದು ಇಂದು ರಾತ್ರಿ ಸುಮಾರು 10 ಗಂಟೆ ವೇಳೆ ಒಡ್ಡೂರು ಫಾರ್ಮ್ಸ್ ನ ಪುತ್ರನ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
    ಇವರು ಪುತ್ರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ , ಓರ್ವ ಪುತ್ರಿಯನ್ನು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರ ಅಂತ್ಯಕ್ರಿಯೆ ನಾಳೆ 10 ಗಂಟೆಗೆ ಒಡ್ಡೂರು ಫಾರ್ಮ್ಸ್ ನಲ್ಲಿ ನಡೆಯಲಿದೆ.

    Share Information
    Advertisement
    Click to comment

    You must be logged in to post a comment Login

    Leave a Reply