Connect with us

BANTWAL

ಬಂಟ್ವಾಳ: ಜನತಾ ಕರ್ಫ್ಯೂ ಅವಧಿಯಲ್ಲಿ ವಾಹನ ಓಡಾಟ, 20 ವಾಹನ ಸೀಜ್

ಬಂಟ್ವಾಳ ಮೇ.01 : ಜನತಾ ಕರ್ಫ್ಯೂ ಅವಧಿಯಲ್ಲಿ ಅನಾವಶ್ಯಕವಾಗಿ ತಿರುಗಾಟ ನಡೆಸಿದ ಸುಮಾರು  20 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರದಲ್ಲಿ ಇಂದು ನಡೆದಿದೆ.

ಬಿಸಿ ರೋಡ್‌ ಹಾಗೂ ಇತರ ಕಡೆಗಳಲ್ಲಿ ಕೋವಿಡ್ ಜನತಾ ಕರ್ಫ್ಯೂ ಅವಧಿಯಲ್ಲಿ  ನಿಯಮ ಉಲ್ಲಂಘನೆ ಮಾಡಿದ ಆರೋಪದಡಿಯಲ್ಲಿ ಎರಡು ಕಾರು ಹಾಗೂ 18 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದು ಪೊಲೀಸರು ದಂಡ ವಿಧಿಸಿದ್ದಾರೆ.

ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು. ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಜನತಾ ಕರ್ಫ್ಯೂ ನಿಯಮ‌ ಜಾರಿ ಮಾಡಿದೆ. ಆದರೆ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಅನಗತ್ಯವಾಗಿ ತಿರುಗಾಟ ನಡೆಸುತ್ತಿದ್ದ ಬಗ್ಗೆ ಪೋಲೀಸರು ಗರಂ ಆಗಿದ್ದಲ್ಲದೆ ಅಂತವರ ವಾಹನಗಳ ಮೇಲೆ ದಂಡ ವಿಧಿಸಿದ್ದಾರೆ. ಬಂಟ್ವಾಳ ನಗರ ಠಾಣಾ ಎಸ್‌ಐ. ಅವಿನಾಶ್ ಹಾಗೂ ಗ್ರಾಮಾಂತರ ಎಸ್.ಐ. ಪ್ರಸನ್ನ ಅವರ ನೇತೃತ್ವದಲ್ಲಿ ವಶಕ್ಕೆ ಪಡೆದುಕೊಂಡು ದಂಡ ವಿಧಿಸಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *