Connect with us

    BANTWAL

    ಬಂಟ್ವಾಳ: ಬಸ್ಸಿನಿಂದ ಇಳಿದು ಹೋಗುತ್ತಿದ್ದ ಯುವತಿ ಮೇಲೆ ಹರಿದ ಕಾರು, ಯುವತಿ ದಾರುಣ ಅಂತ್ಯ..!

    ಕಾರು ಡಿಕ್ಕಿ ಹೊಡೆದು ಪಾದಚಾರಿ ಯುವತಿಯೋರ್ವಳು ಮೃತಪಟ್ಟ ಘಟನೆ ಗುರುವಾರ ಸಂಜೆ ಸುಮಾರು 6.30 ಕ್ಕೆ ರಾಷ್ಟ್ರೀಯ ಹೆದ್ದಾರಿ 75 ರ ಬಂಟ್ವಾಳದ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ.

    ಬಂಟ್ವಾಳ: ಕಾರು ಡಿಕ್ಕಿ ಹೊಡೆದು ಪಾದಚಾರಿ ಯುವತಿಯೋರ್ವಳು ಮೃತಪಟ್ಟ ಘಟನೆ ಗುರುವಾರ ಸಂಜೆ ಸುಮಾರು 6.30 ಕ್ಕೆ ರಾಷ್ಟ್ರೀಯ ಹೆದ್ದಾರಿ 75 ರ ಬಂಟ್ವಾಳದ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ.

    ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ ಪಾವನ ( 23) ಮೃತಪಟ್ಟ ಯುವತಿಯಾಗಿದ್ದಾಳೆ.

    ಬಿಸಿರೋಡಿನ ಸ್ಕ್ಯಾನಿಂಗ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಸಂಜೆ ಕೆಲಸ ಬಿಟ್ಟು ಬಿಸಿರೋಡಿನಿಂದ ಬಸ್ ಮೂಲಕ ಊರಿಗೆ ಹೋಗಿದ್ದಳು.

    ಯುವತಿ ದಾಸಕೋಡಿ ಎಂಬಲ್ಲಿ ಬಸ್ಸ್ ನಿಂದ ಇಳಿದು ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುವ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

    ಡಿಕ್ಕಿಯ ರಭಸಕ್ಕೆ ಯುವತಿ ರಸ್ತೆ ಬದಿಯ ತೋಡಿಗೆ ಎಸೆಯಲ್ಪಟ್ಟಿದ್ದು ಕಾರು ಕೂಡ ಪಲ್ಟಿಯಾಗಿದೆ ಎಂದು ಹೇಳಲಾಗಿದೆ.

    ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿಡಲಾಗಿದೆ.

    ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಇಲ್ಲಿನ ಕಾಂಕ್ರೀಟ್ ರಸ್ತೆಯಲ್ಲಿ ಅತೀ ವೇಗದ ಚಾಲನೆ ಅಪಘಾತಕ್ಕೆ ಕಾರಣವಾಗುತ್ತಿದೆ ಎಂಬ ಆರೋಪ ಸ್ಥಳೀಯರಿಂದ ಕೇಳಿ ಬಂದಿದೆ.

     

    Share Information
    Advertisement
    Click to comment

    You must be logged in to post a comment Login

    Leave a Reply