BANTWAL
ಬಂಟ್ವಾಳ: ಕೋಕ್ ಸಾಗಿಸುತ್ತಿದ್ದ ಲಾರಿ ಪಲ್ಟಿ..!
ಬಂಟ್ವಾಳ, ಆಗಸ್ಟ್ 01: ಕೋಕ್ ಹೇರಿಕೊಂಡು ಹೋಗುತ್ತಿದ್ದ ಲಾರಿಯೊಂದು ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಗೆ ಜಾರಿ ಪಲ್ಟಿಯಾದ ಘಟನೆ ಮಾಣಿ ಸಮೀಪದ ಹಳೀರ ಎಂಬಲ್ಲಿ ಆ.1ರಂದು ನಡೆದಿದೆ.
ಮಾಣಿ ಹಳೀರ ಎಂಬಲ್ಲಿ ಮಂಗಳೂರಿನಿಂದ ಬೆಂಗಳೂರು ಕಡೆಗೆ ಕೋಕ್ ತುಂಬಿಸಿಕೊಂಡು ಬರುತ್ತಿದ್ದ ಟೆನ್ ವೀಲ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಿಂದ ಲಾರಿಚಾಲಕ ಮತ್ತು ಕ್ಲೀನರ್ ಯಾವುದೇ ಗಾಯವಿಲ್ಲದೆ ಪಾರಾಗಿದ್ದಾನೆ.
ಬಿಸಿ ರೋಡಿನಿಂದ ಅಡ್ಡಹೊಳೆ ವರೆಗೆ ರಾಷ್ಟ್ರೀಯ ಹೆದ್ದಾರಿ ಚತುಷ್ಪತ ಕಾಮಗಾರಿ ನಡೆಯುತ್ತಿದ್ದು. ಕುದ್ರೆಬೆಟ್ಟುವಿನಿಂದ ಮಾಣಿ ಹಳೀರವರೆಗೆ ಕಾಂಕ್ರೀಟ್ ರಸ್ತೆ ನಿರ್ಮಾಣವಾಗಿದೆ ಉಳಿದ ಭಾಗ ಅಂದರೆ ಮಾಣಿವ ರೆಗೆ ಒವರ್ ಬ್ರಿಡ್ಜ್ ಕಾಮಗಾರಿ ನಡೆಯುತ್ತಿದ್ದು, ಒಂದೇ ಭಾಗದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಡಲಾಗಿದೆ.
ಆದರೆ ಕಾಮಗಾರಿಯ ಹಿನ್ನೆಲೆಯಲ್ಲಿ ತಾತ್ಕಾಲಿಕ ಸರ್ವೀಸ್ ರಸ್ತೆ ನಿರ್ಮಾಣ ಮಾಡಲಾಗಿದ್ದು, ಮಣ್ಣು ಹಾಕಿ ರಸ್ತೆ ಮಾಡಲಾಗಿದೆ. ಮಳೆಗಾಲದಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟಿದು, ಮಣ್ಣಿನ ರಸ್ತೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಗೆ ತೆರಳಿ ಲಾರಿ ಪಲ್ಟಿಯಾಗಿದೆ. ಕಾಮಗಾರಿ ನಡೆಯುತ್ತಿದೆ ಎಂದು ಗುತ್ತಿದೆ ವಹಿಸಿರುವ ಕೆ.ಎನ್.ಆರ್.ಸಿ.ಕಂಪೆನಿ ಎಚ್ಚರಿಕೆ ಯ ಬೋರ್ಡ್ ಅಳವಡಿಸಿಲ್ಲ ಎಂಬ ಆರೋಪ ಕೂಡ ಕೇಳಿ ಬಂದಿದೆ.