Connect with us

BANTWAL

ಬಂಟ್ವಾಳ :9 ವರ್ಷಗಳಿಂದ ತಲೆ ಮರೆಸಿಕೊಂಡಿರುವ ಆರೋಪಿ ಬಂಧನ..!

ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ,ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಬಂಟ್ವಾಳ: ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ,ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

 

ಮಂಗಳೂರು ತಾಲೂಕಿನ ಸುರತ್ಕಲ್ ಕೃಷ್ಣಾಪುರ ಚೋಕ್ಯಬೆಟ್ಟು ನಿವಾಸಿ ಮಹಮ್ಮದ್ ಅವರ ಮಗ ಮಹಮ್ಮದ್ ಶಾಫಿ ಬಂಧಿತ ಆರೋಪಿ.

‌ಈತ 2017 ರಲ್ಲಿ ಬಂಟ್ವಾಳ ಗ್ರಾಮಾಂತರ ವ್ಯಾಪ್ತಿಯ ಕಳ್ಳತನ ಪ್ರಕರಣವೊಂದರ ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ಇದರ ಜೊತೆಗೆ ಜಿಲ್ಲೆಯ ವಿವಿಧ ಠಾಣೆಯಲ್ಲಿ ಈತನ ಮೇಲೆ ಕಳ್ಳತನ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣಗಳಿದ್ದು, ಅ ಪ್ರಕರಣದಲ್ಲಿಯೂ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ಬಂಟ್ವಾಳ ನಗರ ಪೋಲೀಸ್ ಠಾಣೆ, ವಿಟ್ಲ ಪೋಲಿಸ್ ಠಾಣೆ, ಉಪ್ಪಿನಂಗಡಿ, ಬೆಳ್ತಂಗಡಿ ಹಾಗೂ ಕೋಣಾಜೆ ಪೋಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಈತನ ಮೇಲೆ ಪ್ರಕರಣ ದಾಖಲಾಗಿದ್ದು,ಈತ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

ಇದೀಗ ಖಚಿತ ಮಾಹಿತಿ ಪಡೆದ ಬಂಟ್ವಾಳ ಗ್ರಾಮಾಂತರ ಇನ್ಸ್ ಪೆಕ್ಟರ್ ಶಿವಕುಮಾರ್, ಹಾಗೂ ಉಪನಿರೀಕ್ಷಕರಾದ ಹರೀಶ್ ಮತ್ತು ಮೂರ್ತಿ ಅವರ ಮಾರ್ಗದರ್ಶನ ದಲ್ಲಿ ಸಿಬ್ಬಂದಿ ಗಳಾದ ಗಣೇಶ್ ಪ್ರಸಾದ್, ಪುನೀತ್ ಕುಮಾರ್ , ವಿಜಯಕುಮಾರ್ ,ರಂಜಾನ್ ಅವರು ಪುತ್ತೂರಿನಲ್ಲಿ ಬಂಧಿಸಿ ,ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *