Connect with us

    BANTWAL

    ಬಂಟ್ವಾಳ : ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಕಾರ್ ಡ್ರೈವರ್ ಭೋಜಣ್ಣ ವಿಧಿವಶ..!

    ಬಂಟ್ವಾಳ: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹಿರಿಯ ಕಾರು ಚಾಲಕ ಬೋಜಣ್ಣ ಅವರು ಮಂಗಳವಾರ ವಿಧಿವಶರಾಗಿದ್ದಾರೆ. 62 ವರ್ಷದ ಭೋಜಣ್ಣ ಅವರು ಕೆಲ ದಿನಗಳ ಹಿಂದೆ ಬಿಸಿ ರೋಡ್ ಬಳಿ ರಸ್ತೆ ದಾಟುವಾಗ ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದರು.

    ಅ.11 ರಂದು ರಾತ್ರಿ 7 ರ ಸುಮಾರಿಗೆ ಅವರು ಮನೆಗೆ ಕೋಳಿ ಮಾಂಸ ಕೊಂಡುಹೋಗುವ ಉದ್ದೇಶದಿಂದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕಾರು ನಿಲ್ಲಿಸಿ  ತಲಪಾಡಿ ಬೈಕಂಡಿ ಚಿಕನ್ ಸ್ಟಾಲ್ ಗೆ ರಸ್ತೆ ದಾಟುವ ವೇಳೆ ಬೈಕ್ ಡಿಕ್ಕಿಯಾಗಿತ್ತು. ಇದರಿಂದ ಕಾಲಿಗೆ ತೀವ್ರ ಗಾಯವಾಗಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅ. 12 ರಂದು ಅಪಘಾತದ ಬಗ್ಗೆ  ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಏಳು ದಿನಗಳ ನಂತರ ಇವರು ಆಸ್ಪತ್ರೆಯಿಂದ ಡಿಸ್ ಚಾರ್ಜ್ ಗೊಂಡು ಮನೆಗೆ ತೆರಳಿದ್ದರು. ಬಳಿಕ ಮನೆಯಲ್ಲಿ ಉಸಿರಾಟದ ತೊಂದರೆ ಕಂಡು ಬಂದಿದ್ದು ಇವರನ್ನು ಕೂಡಲೇ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಆವರು ಮಂಗಳವಾರ ಬೆಳಗ್ಗೆ ನಿಧನ ಹೊಂದಿದ್ದಾರೆ. ಅಪಘಾತ ಪ್ರಕರಣದ ಬಗ್ಗೆ ಈಗಾಗಲೇ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಎಸ್.ಐ.ಸುತೇಶ್ ಅವರು ಮರಣೋತ್ತರ ಪರೀಕ್ಷೆ ವೇಳೆ ಹಾಜರಿದ್ದರು.  ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಕಂಜತ್ತೂರು ನಿವಾಸಿ  ಅಂಬಾಸಿಡರ್ ಕಾರು ಚಾಲಕ ಬೋಜ ಮೂಲ್ಯ ಬೋಜಣ್ಣ ಎಂದೇ ಖ್ಯಾತಿ ಪಡೆದಿದ್ದರು. ಸಾಮಾಜಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಭೋಜಣ್ಣ  ಸುಮಾರು ನಾಲ್ಕು ದಶಕಗಳ ಕಾಲ  ಅಂಬಾಸಿಡರ್ ಕಾರು ಚಾಲಕರಾಗಿ ಸೇವೆ ಸಲ್ಲಿಸಿದ್ದಾರೆ. ಬಿಸಿರೋಡಿನ ಆಸುಪಾಸಿನಲ್ಲಿ ಬೋಜಣ್ಣ ಎಂದೇ ಖ್ಯಾತಿ ಪಡೆದಿದ್ದ ಇವರು ಕಾರು ಪಾರ್ಕ್ ನಲ್ಲಿ ಪರಿಚಯಸ್ಥರನ್ನು ಕರೆದು ಮಾತನಾಡುವ ವ್ಯಕ್ತಿಯಾಗಿದ್ದರು. ಕಾರು ಚಾಲಕರ ಸಂಘದಲ್ಲಿ ಸಕ್ರಿಯರಾಗಿದ್ದರು. ಭೋಜಣ್ಣ ಅವರ ಅಕಾಲಿಕ ನಿಧನಕ್ಕೆ ಸಹ ಚಾಲಕರು, ಸಮಾಜದ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

     

    Share Information
    Advertisement
    Click to comment

    Leave a Reply

    Your email address will not be published. Required fields are marked *