ಕಾರು ಡಿಕ್ಕಿಯಾಗಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ  ವಗ್ಗ ಸಮೀಪದ ಕಾಡಬೆಟ್ಟು ಕ್ರಾಸ್ ಎಂಬಲ್ಲಿ ನಡೆದಿದೆ.

ಬಂಟ್ವಾಳ: ಕಾರು ಡಿಕ್ಕಿಯಾಗಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ  ವಗ್ಗ ಸಮೀಪದ ಕಾಡಬೆಟ್ಟು ಕ್ರಾಸ್ ಎಂಬಲ್ಲಿ ನಡೆದಿದೆ.

ಕೆಂಪು ಗುಡ್ಡೆ ನಿವಾಸಿ ವಿನಾಯಕ ಪೈ ಮೃತಪಟ್ಟ ದುರ್ದೈವಿಯಾಗಿದ್ದಾರೆ .

ವಿನಾಯಕ ಪೈ ಅವರ ಮನೆಯಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ ಬೆಳಿಗ್ಗೆ ಹೊತ್ತಿನ ಉಪಹಾರ ತರಲೆಂದು ಅವರು ವಗ್ಗದ ಹೊಟೇಲ್ ಒಂದಕ್ಕೆ ಹೋಗುವ ವೇಳೆ ಈ ಅಪಘಾತ ನಡೆದಿದೆ ಎನ್ನಲಾಗಿದೆ.

ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ವ್ಯಾಗನಾರ್ ಕಾರು ರಿಕ್ಷಾಕ್ಕೆ ಡಿಕ್ಕಿಯಾಗಿದೆ.

ಗಂಭೀರವಾಗಿ ಗಾಯಗೊಂಡ ವಿನಾಯಕ ಪೈ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಸ್ಪತ್ರೆ ಸಾಗಿಸುವ ದಾರಿ ಮಧ್ಯದಲ್ಲಿ ಅವರು ಅಸುನೀಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಮೆಲ್ಕಾರ್ ಟ್ರಾಫಿಕ್ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು,ಪ್ರಕರಣ ದಾಖಲಿಸಿಕೊಂಡಿದ್ದಾರೆ.

https://youtu.be/Flovu6JEFp4

Share Information