Connect with us

BANTWAL

ಬಂಟ್ವಾಳ : ಮುಳುವಾದ ಕೆಲಸದಾತನ ಮೇಲಿನ ಅತೀ ವಿಶ್ವಾಸ,ಬಿಲ್ಡರ್ ಮನೆಯನ್ನೇ ಕೊಳ್ಳೆ ಹೊಡೆದ ಕಾರ್ಮಿಕ..!

ಬಂಟ್ವಾಳ: ಹೆಸರಾಂತ ಬಿಲ್ಡರ್ ಓರ್ವರ ಮನೆಯ ಕೆಲಸಕ್ಕಿದ್ದ ವ್ಯಕ್ತಿಯೋರ್ವ ಲಕ್ಷಾಂತರ ರೂ ಮೌಲ್ಯದ ನಗ ಹಾಗೂ ನಗದನ್ನು ಕಳುವು ಮಾಡಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ಎಂಬಲ್ಲಿ ನಡೆದಿದೆ.

ತಾಲೂಕಿನ ಪುದು ಗ್ರಾಮದ ಕೋಡಿಮಜಲು ನಿವಾಸಿಯಾಗಿರುವ ಇಮಾದ್ ಬಿಲ್ಡರ್ ಮಾಲಕ ಮೊಹಮ್ಮದ್ ಝಫರುಲ್ಲಾ ಎಂಬವರ ಮನೆಯ ಕಪಾಟಿನೊಳಗೆ ಇರಿಸಲಾಗಿದ್ದ ಲಕ್ಷಾಂತರ ಬೆಲೆ ಬಾಳುವ ಚಿನ್ನಾಭರಣ ಸಹಿತ ಲಕ್ಷಾಂತರ ರೂ ಹಣವನ್ನು ಮನೆಯ ಕೆಲಸದಾತನೇ ಕದ್ದುಕೊಂಡು ಹೋಗಿರುವುದಾಗಿ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಸುಮಾರು 27,50,000 ರೂ ನಗದು ಹಾಗೂ 4,96,000 ರೂ.  ಮೌಲ್ಯದ ವಿವಿಧ ಬಗೆಯ ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಘಟನೆ ನಡೆದಿದ್ದು ಹೇಗೆ ಮತ್ತು ಯಾವಾಗ?
ಇಮಾದ್ ಬಿಲ್ಡರ್ ಮಾಲಕ ಮೊಹಮ್ಮದ್ ಝಫರುಲ್ಲಾ ಎಂಬವರ ಜೊತೆ ಸುಮಾರು 8 ತಿಂಗಳ ಹಿಂದೆ ಕಟ್ಟಡ ಕಾಮಗಾರಿಯ ಕೆಲಸಕ್ಕೆ ಮಂಜೇಶ್ವರ ಮೂಲದ ಆಲಿ ಎಂಬಾತ ಸೇರಿದ್ದ. ಆತನಿಗೆ ಫರಂಗಿಪೇಟೆ ಎಂಬಲ್ಲಿನ ಹುಡುಗಿಯ ಜೊತೆ ವಿವಾಹವಾಗಿದ್ಸು, ಮಾಲಕರ ಜೊತೆ ಹೆಚ್ಚಿನ ವಿಶ್ವಾಸ ಹೊಂದಿದ್ದ. ಈ ಕಾರಣಕ್ಕಾಗಿ ಸಹಾಯಕನಾಗಿ ದುಡಿಯುತ್ತಿದ್ದ ಆಲಿಯಲ್ಲಿ ಮನೆಗೆ ಅಗತ್ಯ ಸಾಮಾಗ್ರಿಗಳನ್ನು ಕಳುಹಿಸಿಕೊಡುತ್ತಿದ್ದರು. ಆದರೆ ಈತನ ಮೇಲಿರಿಸಿದ್ದ ಅತೀ ವಿಶ್ವಾಸ ಮಾಲಕರಿಗೆ ಮುಳುವಾಗಿ ಪರಿಣಮಿಸಿತು.
ಅ.18 ರಂದು ಮನೆ ಮಂದಿ ಎಲ್ಲರು ಮನೆಗೆ ಬೀಗ ಹಾಕಿ ಮಂಗಳಾದೇವಿ, ಜಪ್ಪು ನಲ್ಲಿರುವ ತಮ್ಮನ ಮನೆಗೆ ಹೋಗಿದ್ದರು.
ಮನೆಗೆ ಬೀಗ ಹಾಕಿ ಅದರ ಕೀ ಯನ್ನು ಆಲಿಯಲ್ಲಿ ನೀಡಿದ್ದರು.
‌‌ ಅ ಬಳಿಕ 19 ರಂದು ಕಟ್ಟಡ ಕಾಮಗಾರಿಯ ವಿಚಾರಕ್ಕೆ ಮಾಲಕ ಮೊಹಮ್ಮದ್ ಅವರು ಈತನಿಗೆ ಪೋನ್ ಮಾಡಿದಾಗ ಪೋನ್ ಸ್ವಿಚ್ ಆಫ್ ಆಗಿತ್ತು.
ಆದರೆ ಪೋನ್ ಸ್ವಿಚ್ ಆಫ್ ಆಗಿರುವ ವಿಚಾರವನ್ನು ಅಷ್ಟಾಗಿ ಸೀರಿಯಸ್ ಆಗಿ ತೆಗೆದುಕೊಂಡಿರದ ಮಾಲಕರು ಮರುದಿನ ಅಂದರೆ ಅ. 20 ರಂದು ಅಗತ್ಯ ಕೆಲಸವೊಂದರ ನಿಮಿತ್ತ ಬೆಂಗಳೂರಿಗೆ ತೆರಳಿದ್ದರು.
ಬೆಂಗಳೂರಿಗೆ ತೆರಳಿದ ಬಳಿಕ ಅಲ್ಲಿಂದ ಪೋನ್ ಮಾಡಿದಾಗಲೂ ಈತನ ಮೊಬೈಲ್ ಆಫ್ ಆಗಿತ್ತು.
ಕೆಲಸದ ಒತ್ತಡದ ನಡುವೆಯ ಅ. 23 ರಂದು ಊರಿಗೆ ವಾಪಾಸು ಆದ ಇವರು ರಾತ್ರಿ ಸುಮಾರು 8 ಗಂಟೆಗೆ ಮನೆಗೆ ಬಂದು ನೋಡಿದಾಗ ಮನೆಯ ಬಾಗಿಲು ಹಾಕಿಕೊಂಡಿತ್ತು. ಕೀ ಕೊಡುವಂತೆ ಆತನಿಗೆ ಪೋನ್ ಮಾಡಿದಾಗ ಆಗಲೂ ಆಫ್ ಆಗಿತ್ತು.ಸಂಶಯದಿಂದ ಮನೆಯ ಹಿಂಬದಿಯಿಂದ ಕಿಟಕಿಯಲ್ಲಿ ಇಣುಕಿ ನೋಡಿದಾಗ ಕೋಣೆಯ ಬಾಗಿಲು ತೆರದುಕೊಂಡಿದ್ದು, ಕಪಾಟಿನ ಲಾಕರ್ ಮುರಿದು ಅದರಲ್ಲಿ ಇದ್ದ ಸೊತ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದುಕೊಂಡಿತ್ತು.
ಕೂಡಲೇ ಗ್ರಾಮಾಂತರ ಪೋಲಿಸರಿಗೆ ದೂರು ನೀಡಿ , ಪೋಲೀಸ್ ಸಮಕ್ಷಮದಲ್ಲಿ ಮನೆಯ ಬಾಗಿಲು ಮುರಿದು ಒಳಗೆ ಹೋಗಿ‌ ನೋಡಿದಾಗ ಮೊಹಮ್ಮದ್ ಅವರು ಕಪಾಟಿನಲ್ಲಿರಿಸಲಾಗಿದ್ದ ರೂ. 25 ಲಕ್ಷ ರೂಪಾಯಿ ಹಾಗೂ ಅವರ ತಂದೆಯ ಕಪಾಟಿನಲ್ಲಿರಿಸಲಾಗಿದ್ದ ರೂ.2,50,000 ರೂ ಹಾಗೂ 4,96,000 ರೂ. ಮೌಲ್ಯದ 24 ಗ್ರಾಂ ತೂಕದ ಬ್ರಾಸ್ ಲೈಟ್, 16 ಗ್ರಾಂ ತೂಕದ ಎರಡು ಚಿನ್ನದ ಉಂಗುರ, 40 ಗ್ರಾಂ ತೂಕದ ಚಿನ್ನದ ಬಲೆಗಳು, 8 ಗ್ರಾಂ ತೂಕದ ಚಿನ್ನದ ಬೆಂಡೋಲೆ, 32 ಗ್ರಾಂ.ತೂಕದ ಚಿನ್ನದ ಮಾಲೆ, 4 ಗ್ರಾಂ ತೂಕದ ಚಿನ್ನದ ಸರ ಕಳವು ಮಾಡಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಹರೀಶ್ ಹಾಗೂ ಬೆರಳಚ್ಚು ತಜ್ಞರು,ಶ್ವಾನದಳದವರು ಆಗಮಿಸಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *