Connect with us

    BANTWAL

    ಬಂಟ್ವಾಳ: ಮನೆ ಮೇಲೆ ಗುಡ್ಡ ಕುಸಿತ: ತಾಯಿ ಮೃತ್ಯು; ಮಗಳ ರಕ್ಷಣೆ

    ಬಂಟ್ವಾಳ, ಜುಲೈ 08: ಮನೆ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಸಜೀಪ ಮುನ್ನೂರು ಗ್ರಾಮದ ನಂದಾವರ ಗುಂಪು ಮನೆ ಎಂಬಲ್ಲಿ ನಡೆದಿದೆ.

    ಮೃತರನ್ನು ಮುಹಮ್ಮದ್ ಎಂಬವರ ಪತ್ನಿ ಝರೀನಾ(47) ಎಂದು ಗುರುತಿಸಲಾಗಿದೆ. ಅವರ ಪುತ್ರಿ ಸಫಾ(20) ಅವರನ್ನು ರಕ್ಷಿಸಲಾಗಿದೆ. ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಮುಹಮ್ಮದ್ ಅವರ ಮನೆಗೆ ಗುಡ್ಡ ಕುಸಿದು ಬಿದ್ದಿದೆ.

    ಈ ವೇಳೆ ಝರೀನಾ ಮತ್ತು ಸಫಾ ಕುಸಿದ ಮಣ್ಣಿನೊಳಗೆ ಸಿಲುಕಿಕೊಂಡಿದ್ದರು. ಅಗ್ನಿಶಾಮಕ ದಳ, ಪೊಲೀಸರು ಹಾಗೂ ಸ್ಥಳೀಯರು ಕಾರ್ಯಾಚರಣೆ ನಡೆಸಿ ಅವರನ್ನು ರಕ್ಷಣಾ ಕಾರ್ಯ ಕೈಗೊಂಡರೂ ಅಷ್ಟರಲ್ಲಿ ಝರೀನಾ ಕೊನೆಯುಸಿರೆಳೆದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸಫಾರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಟ್ವಾಳ ಅಗ್ನಿಶಾಮಕ ಅಧಿಕಾರಿಗಳು, ಪೊಲೀಸರು, ತಾಲೂಕು ಆಡಳಿತದ ಸಿಬಂದಿ ಸ್ಥಳದಲ್ಲಿ ತಹಶೀಲ್ದಾರ್ ಎಸ್.ಬಿ.ಕೂಡಲಗಿ ಸ್ಥಳದಲ್ಲಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply