BANTWAL
ಬಂಟ್ವಾಳ : ಅಪಾಯದ ಮಟ್ಟ ತಲುಪಿದ ನೇತ್ರಾವತಿ, ನದಿ ತಟದ ಗ್ರಾಮಗಳಿಗೆ ಎಚ್ಚರಿಕೆ ರವಾನೆ..!
ಬಂಟ್ವಾಳ : ಭಾರಿ ಮಳೆ ಹಿನ್ನಲೆಯಲ್ಲಿ ದಕ್ಷಿಣ ಕನ್ನಡದ ಜೀವನದಿ ನೇತ್ರಾವತಿಯಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆ ಕಂಡಿದ್ದು, ಅಪಾಯದ ಮಟ್ಟ 8.2 ಮೀಟರ್ ತಲುಪಿದೆ.
ಬಂಟ್ವಾಳದಲ್ಲಿ ಈಗಾಗಲೇ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ನೀರಿನ ಮಟ್ಟ ಇನ್ನೂ ಹೆಚ್ಚಾದರೆ ಪ್ರವಾಹದ ಅಪಾಯದ ಸಾಧ್ಯತೆ ಹೆಚ್ಚಿದೆ. ನದಿಯ ತಟಗಳಲ್ಲಿರುವ ಗ್ರಾಮಾಂತರ ಪ್ರದೇಶದ ಜನರಿಗೆ ಜಾಗೃತೆ ವಹಿಸಲು ಸ್ಥಳೀಯಾಡಳಿತ ಸೂಚಿಸಿದೆ. ಇನ್ನೂ ನೀರಿನ ಅಪಾಯವುಳ್ಳ ಶಾಲೆಗಳ ಸಿಆರ್ ಪಿ, ಮತ್ತು ಎಸ್.ಡಿ.ಎಂಸಿ ಸಮಿತಿಗಳಿಗೆ ತಮ್ಮ ಹಂತದಲ್ಲೇ ರಜೆ ನೀಡುವಂತೆ ತಾಲೂಕು ತಹಶೀಲ್ದಾರ್ ಅರ್ಚನಾ ಭಟ್ ಸೂಚನೆ ನೀಡಿದ್ದಾರೆ. ಶಿಥಿಲಗೊಂಡ ಗೋಡೆಯಿರುವ ಕಟ್ಟಡಗಳು, ದುರ್ಬಲ ಶೀಟುಗಳು, ವಿದ್ಯುತ್ ಅಪಾಯದ ಬಗ್ಗೆ ಸೂಕ್ತ ಪರಿಶೀಲನೆ ನಡೆಸಿ ಸಮರ್ಪಕವಾಗಿ ಇರುವ ತರಗತಿ ಕೊಠಡಿಗಳಲ್ಲಿ ಮಾತ್ರ ವಿದ್ಯಾರ್ಥಿಗಳನ್ನು ಕೂರಿಸಬೇಕು ಎಂದು ಕ್ಲಸ್ಟರ್ ಹಾಗೂ ಶಾಲಾ ಮುಖ್ಯ ಶಿಕ್ಷಕರಿಗೆ ಸೂಚಿಸಿಲಾಗಿದೆ ಎಂದು ತಹಶೀಲ್ದಾರ್ ಕಛೇರಿ ಪ್ರಕಟಣೆ ತಿಳಿಸಿದೆ.