BANTWAL
ಬಂಟ್ವಾಳ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಬಂಟ್ವಾಳ, ಆಗಸ್ಟ್ 14: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದಲ್ಲಿ ಬಂಧಿಸಿ,ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಅಪ್ರಾಪ್ತ ಬಾಲಕಿಗೆ ಆಮಿಷ ತೋರಿಸಿ ಪಾರ್ಕ್ ಒಂದಕ್ಕೆ ಬರುವಂತೆ ಮಾಡಿ ಅಲ್ಲಿ ಮೂವರು ಆರೋಪಿಗಳು ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಈ ಪೈಕಿ ಇಬ್ಬರು ಆರೋಪಿಗಳ ಬಂಧನವಾಗಿದ್ದು ಇನ್ನೋರ್ವ ಪ್ರಮುಖ ಆರೋಪಿ ನಾಪತ್ತೆಯಾಗಿದ್ದ. ಇದೀಗ ನಾಪತ್ತೆಯಾಗಿದ್ದ ಪ್ರಮುಖ ಆರೋಪಿಯಾಗಿದ್ದ ಅಫೀಕ್ ಯಾನೆ ಮಹಮ್ಮದ್ ಅಫೀಕ್ ( 19)ಎಂಬಾತನ ಬಂಧನವಾಗಿದೆ.
ಈ ಪ್ರಕರಣದ ಇನ್ನೆರಡು ಆರೋಪಿಗಳಾದ ಮಹಮ್ಮದ್ ಫೈಝಲ್ ಹಾಗು ಲಿಖೇಶ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ,ಅವರು ಜಾಮೀನು ಮೇಲೆ ಬಿಡುಗಡೆಗೊಂಡಿದ್ದಾರೆ. ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮಹಮ್ಮದ್ ಅಫೀಕ್ ನ ಬಂಧನಕ್ಕೆ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿತ್ತು.
You must be logged in to post a comment Login