BANTWAL
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಕಾರು- ಪ್ರಯಾಣಿಕರು ಪಾರು..!
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಚರಂಡಿಗೆ ಪಲ್ಟಿಯಾದ ಘಟನೆ ಇಂದು ಮುಂಜಾನೆ ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ನಡೆದಿದೆ.
ಬೆಳ್ತಂಗಡಿ ಕಡೆಯಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿರುವ ಚರಂಡಿಗೆ ಪಲ್ಟಿಯಾಗಿ ನಿಂತಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಚಾಲಕ ಸಹಿತ ಪ್ರಯಾಣಿಕರಿಗೆ ಯಾವುದೇ ಗಾಯವಾಗದೆ ಪಾರಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕಾರಿನಲ್ಲಿದ್ದ ಪ್ರಯಾಣಿಕರು ಯಾರು ಎಲ್ಲಿಯವರು ಎಂಬ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ಬಗ್ಗೆ ಪೋಲೀಸ್ ಠಾಣೆಗೆ ಕೂಡ ಯಾವ ಮಾಹಿತಿ ಸಿಕ್ಕಿಲ್ಲ ಎಂದು ತಿಳಿಸಿದ್ದಾರೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
You must be logged in to post a comment Login