Connect with us

    BANTWAL

    ಬಂಟ್ವಾಳ : ಕೋಳಿ ಮಾಂಸದೊಂದಿಗೆ ಬಸ್ ಹತ್ತಿದ ವ್ಯಕ್ತಿಯನ್ನು ಬಸ್‌ ಸಮೇತ ಪೊಲೀಸ್ ಠಾಣೆಗೊಯ್ದ ಬಸ್ ಚಾಲಕ..!

    ಪ್ರಯಾಣಿಕನೋರ್ವ ಚೀಲದಲ್ಲಿ ಕೋಳಿ ಮಾಂಸ ಹಿಡಿದುಕೊಂಡು ಬಸ್ ಹತ್ತಿದ ಕಾರಣಕ್ಕಾಗಿ ಆತನಿಗೆ ನಿರ್ವಾಹಕ ಅವ್ಯಾಚ್ಚ ಶಬ್ದದಿಂದ ಬೈದುದಲ್ಲದೆ, ಚಾಲಕ ಸೀದಾ ಪ್ರಯಾಣಿಕರನ್ನು ಕೂರಿಸಿಕೊಂಡು ಪೋಲಿಸ್ ಠಾಣೆಗೆ ತಂದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ.

    ಬಂಟ್ವಾಳ: ಪ್ರಯಾಣಿಕನೋರ್ವ ಚೀಲದಲ್ಲಿ ಕೋಳಿ ಮಾಂಸ ಹಿಡಿದುಕೊಂಡು ಬಸ್ ಹತ್ತಿದ ಕಾರಣಕ್ಕಾಗಿ ಆತನಿಗೆ ನಿರ್ವಾಹಕ ಅವ್ಯಾಚ್ಚ ಶಬ್ದದಿಂದ ಬೈದುದಲ್ಲದೆ, ಚಾಲಕ ಸೀದಾ ಪ್ರಯಾಣಿಕರನ್ನು ಕೂರಿಸಿಕೊಂಡು ಪೋಲಿಸ್ ಠಾಣೆಗೆ ತಂದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ.

    ಸುರೇಶ್ ಎಂಬವರು ತುಂಬೆಯಲ್ಲಿ ಸ್ಟೇಟ್ ಬ್ಯಾಂಕ್ ಪುತ್ತೂರು ಕೆ.ಎಸ್.ಆರ್.ಟಿ.ಸಿ.ಬಸ್ ಹತ್ತಿದ್ದಾರೆ.

    ಬಸ್ ನಿರ್ವಾಹಕ ಟಿಕೆಟ್ ಪಡೆಯಲು ಬಂದಾಗ ಈತನ ಕೈಯಲ್ಲಿ ಚೀಲವೊಂದ್ದಿದ್ದು,ಇದರ ಬಗ್ಗೆ ವಿಚಾರಿಸಿದ್ದಾನೆ.

    ಪ್ರಯಾಣಿಕ ಕೋಳಿ ಮಾಂಸ ಎಂದು ತಿಳಿಸಿದಾಗ ಬಸ್ ನಿಂದ ಇಳಿಯುವಂತೆ ಒತ್ತಾಯಿಸಿದ್ದಾನೆ. ಕೋಳಿ ಮಾಂಸ ಬಸ್ ನಲ್ಲಿ ತರಲು ಅವಕಾಶವಿಲ್ಲ ಎಂಬ ವಾದ ನಿರ್ವಾಹಕನದ್ದು, ಆದರೆ ಕೂಲಿ ಕಾರ್ಮಿಕನಿಗೆ ಇದರ ಅರಿವಿಲ್ಲದೆ , ಬಸ್ ನಿಂದ ಇಳಿಯಲು ಒಪ್ಪಲಿಲ್ಲ.

    ಇವರಿಬ್ಬರ ನಡುವೆ ವಾಗ್ವಾದ ನಡೆದಿದೆ. ನಿರ್ವಾಹಕ ಪ್ರಯಾಣಿಕನಿಗೆ ಕೆಟ್ಟ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಹೇಳಲಾಗಿದೆ.

    ಈತ ಬಸ್ ನಿಂದ ಇಳಿಯದ ಕಾರಣಕ್ಕಾಗಿ ಚಾಲಕ ಪ್ರಯಾಣಿಕರು ತುಂಬಿದ್ದ ಬಸ್ ನ್ನು ಸೀದಾ ಪೋಲೀಸ್ ಠಾಣೆಗೆ ತಂದು ಪ್ರಯಾಣಿಕನನ್ನು ಎಳೆದು ಇಳಿಸಿ ಹೋಗಿದ್ಧಾನೆ.

    ಎಸ್.ಐ.ಬುದ್ದಿಮಾತು
    ಈ ವೇಳೆ ಠಾಣೆಯಲ್ಲಿದ್ದ ಎಸ್.ಐ.ರಾಮಕೃಷ್ಣ ಅವರು ಕೆ.ಎಸ್. ಆರ್.ಟಿ.ಸಿ.ಬಸ್ ಚಾಲಕ ಮತ್ತು ನಿರ್ವಾಹಕನಿಗೆ ಬುದ್ದಿ ಮಾತು ಹೇಳಿದ್ದಾರೆ.

    ಕೂಲಿ ಕಾರ್ಮಿಕರು ಬಸ್ ನಲ್ಲಿ ಮಾಂಸ , ಮೀನು ಕೊಂಡು ಅವಕಾಶ ವಿಲ್ಲ ಎಂದಾದರೆ ಮತ್ತೆ ಹೇಗೆ ಕೊಂಡುಹೋಗುವುದು ಎಂಬ ಪ್ರಶ್ನೆಯನ್ನು ಪ್ರಯಾಣಿಕ ಮಾಡಿದ್ದಾನೆ.

    ಕಾರು ,ರಿಕ್ಷಾ ಬಾಡಿಗೆ ಮಾಡಿಕೊಂಡು ಒಂದು ಕೆ.ಜಿ.ಕೋಳಿ ಕೊಂಡು ಹೋಗಬೇಕಾ ಎಂಬ ಪ್ರಶ್ನೆಯನ್ನು ಕೇಳಿದ್ದಾರೆ.

    ಬಡವರು ಕೋಳಿ ಮಾಂಸ,ಕೊಂಡು ಹೋದರೆ ಅವರನ್ನು ಪೋಲೀಸ್ ಠಾಣೆಗೆ ಕರೆದುಕೊಂಡು ಹೋಗುವುದು ಎಷ್ಟು ಸರಿ ಎಂಬ ಪ್ರಶ್ನೆ ಸಾರ್ವಜನಿಕರದ್ದು, ನಿರ್ವಾಹಕ ಚಾಲಕರ ಇಂತಹ ನಡೆಯ ಬಗ್ಗೆ ಅಕ್ರೋಶಗಳು ವ್ಯಕ್ತವಾಗಿದೆ.

    ಕೋಳಿ,ಮೀನು ತರುವಂತಿಲ್ಲ- KSRTC ಸ್ಪಷ್ಟನೆ….
    ಬಸ್ ನಲ್ಲಿ ಕೋಳಿ,ಮೀನು ಮಾಂಸ ಬಸ್ ನಲ್ಲಿ ತರುವಂತಿಲ್ಲ, ಜೀವ ಇರುವ ವಸ್ತುವನ್ನು ತರಬಹುದು, ಮಾಂಸ ಇತರರಿಗೆ ವಾಸನೆ ಬರುತ್ತದೆ, ಇತರ ಪ್ರಯಾಣಿಕರಿಗೆ ತೊಂದರೆಯಾಗುತ್ತದೆ. ಎಂಬ ನಿಟ್ಟಿನಲ್ಲಿ ನಿಗಮ ಅದೇಶ ಮಾಡಿದೆ ಎಂದು ಕೆ.ಎಸ್. ಆರ್.ಟಿ.ಸಿ.ಬಂಟ್ವಾಳ ವಿಭಾಗದ ವಿಭಾಗೀಯ ಅಧಿಕಾರಿ ಶ್ರೀಶ ಭಟ್ ಅವರು ಮಾಹಿತಿ ನೀಡಿದ್ದಾರೆ.

     

    Share Information
    Advertisement
    Click to comment

    You must be logged in to post a comment Login

    Leave a Reply