Connect with us

    BANTWAL

    ಬಂಟ್ವಾಳ: ಅಪ್ರಾಪ್ತ ಬಾಲಕಿಯನ್ನು ಗರ್ಭವತಿ ಮಾಡಿದ ಮಲತಂದೆ..!

    ಬಂಟ್ವಾಳ, ನವೆಂಬರ್: ಬಂಟ್ವಾಳದ ತುಂಬೆಯಲ್ಲಿ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದ ಮಲತಂದೆ ತಂದೆ ಜೈಲು ಪಾಲಾದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ತುಂಬೆ ರಾಮ ನಿವಾಸ ನಿವಾಸಿಯಾಗಿರುವ ವೆಂಕಟೇಶ ಕಾರಂತ ಮಗಳ ಮೇಲೆ ಅತ್ಯಾಚಾರ ನಡೆಸಿ ಗರ್ಭವತಿಯನ್ನಾಗಿ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರೋಪಿಯಾಗಿದ್ದಾನೆ. ಈತ ತುಂಬೆಯಲ್ಲಿ ಪುರೋಹಿತನಾಗಿ ಕೆಲಸ ಮಾಡುತ್ತಿದ್ದು, ಮಗಳ ಮೇಲೆಯೇ ಕಳೆದ 4 ತಿಂಗಳಿನಿಂದ ನಿರಂತರವಾಗಿ ಅತ್ಯಾಚಾರ ಮಾಡುತ್ತಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

    ಇನ್ನು ಬಾಲಕಿಗೆ ವೆಂಕಟೇಶ ಕಾರಂತ ಅವರು ಮಲತಂದೆ ಸಂಬಂಧ ಎಂಬ ಮಾಹಿತಿ ಲಭ್ಯವಾಗಿದೆ. ಬಾಲಕಿಯ ತಂದೆ ಅಪಘಾತದಲ್ಲಿ ಮರಣಹೊಂದಿದ ನಂತರ ಆಕೆಯ ತಾಯಿ ಎರಡನೇ ಮದುವೆಯಾಗಿದ್ದು, ಬಾಲಕಿಯೂ ಕೂಡ ಇವರ ಜೊತೆಯಲ್ಲಿ ವಾಸವಾಗಿದ್ದಳು ಎಂದು ತಿಳಿದು ಬಂದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply