BANTWAL
ಬಂಟ್ವಾಳ : ನದಿಗೆ ಬಿದ್ದ ವೃದ್ಧನನ್ನು ಜೀವದ ಹಂಗು ತೊರೆದು ರಕ್ಷಿಸಿದ ಯುವಕರು..!
ಬಂಟ್ವಾಳ : ಆಯ ತಪ್ಪಿ ನದಿಗೆ ಬಿದ್ದಿದ್ದ ವೃದನನ್ನು ಜೀವದ ಹಂಗು ತೊರೆದು ಇಬ್ಬರು ಯುವಕರು ರಕ್ಷಣೆ ಮಾಡಿದ ಘಟನೆ ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದಿದ್ದು, ಯುವಕರ ಕಾರ್ಯಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.
ವಿಟ್ಲದ ಸುರಂಬಡ್ಕದ ಕಿಂಡಿ ಅಣೆಕಟ್ಟು ಸೇತುವೆ ಬಳಿ ಉಮ್ಮರ್ ಎಂದ 70 ವರ್ಷದ ವೃದ್ದ ನಡೆದುಕೊಂಡು ಹೋಗುತ್ತಿದ್ದಾಗ ಆಯತಪ್ಪಿ ಉಕ್ಕಿ ಹರಿಯುತ್ತಿದ್ದ ನದಿಗೆ ಬಿದ್ದಿದ್ದಾರೆ. ಇದನ್ನು ದೂರದಿಂದ ಗಮನಿಸಿದ ಚೆಕ್ಕಿದಕಾಡು ನಿವಾಸಿಗಳಾದ ಅಶೋಕ್ ಹಾಗೂ ಸುರೇಶ್ ಅವರು ಎಂಬ ಯುವಕರು ಉಕ್ಕಿ ಹರಿಯುತ್ತಿದ್ದ ಪ್ರವಾಹವನ್ನೂ ಲೆಕ್ಕಿಸದೆ ನದಿಗೆ ಹಾರಿ ಈಜಾಡಿಕೊಂಡು ಹೋಗಿ ಉಮರ್ ಅವರನ್ನು ಅಪಾಯದಿಂದ ರಕ್ಷಿಸಿ ದಡಕ್ಕೆ ತಂದಿದ್ದಾರೆ. ಸ್ಥಳೀಯರು ಯುವಕರಿಗೆ ಸಾಥ್ ನೀಡಿದ್ದು ಅಶೋಕ್ ಮತ್ತು ಸುರೇಶ್ ಅವರುಗಳ ಸಮಯಪ್ರಜ್ಞೆ ಹಾಗೂ ಮಾನವೀಯ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಸೇತುವೆಗೆ ಯಾವುದೇ ರೀತಿಯ ತಡೆ ಇಲ್ಲದೆ ಇರುವುದು ಇದಕ್ಕೆ ಕಾರಣವೆನ್ನಲಾಗಿದೆ.