DAKSHINA KANNADA
ಬಂಟ್ವಾಳ : ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇನ್ನಿಲ್ಲ..!!
ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಸಲ್ಪಡುತ್ತಿದ್ದ `ಲಲಿತ ಕಲಾ ಕೇಂದ್ರ’ಕ್ಕೆ ಸೇರಿ ಯಕ್ಷಗಾನ ಹೆಜ್ಜೆಗಾರಿಕೆ ಕಲಿತರು. ಅದಾದ ಬಳಿಕ ಕಟೀಲು ಮೇಳದಲ್ಲಿ 4 ವರ್ಷ, ಪುತ್ತೂರು ಮೇಳ, ಕದ್ರಿ ಮೇಳ, ಕುಂಬಳೆ ಮೇಳದಲ್ಲಿ ತಿರುಗಾಟ ನಡೆಸಿದರು.ಮತ್ತೆ ಕಟೀಲು ಮೇಳ, ಎಡನೀರು ಮೇಳ, ಹೊಸನಗರ ಮೇಳ, ಬಳಿಕ ಹನುಮಗಿರಿ ಮೇಳ ಹೀಗೆ ಸುಮಾರು 50 ವರ್ಷಗಳ ಯಕ್ಷಗಾನ ತಿರುಗಾಟದಲ್ಲಿ ಹಾಸ್ಯಗಾರ ಪಾತ್ರವಲ್ಲದೆ, ಅಗತ್ಯ ಬಿದ್ದರೆ ಇತರ ಪಾತ್ರಗಳನ್ನೂ ಅವರು ನಿರ್ವಹಿಸಿದ್ದಾರೆ. ಜಯರಾಮ ಆಚಾರ್ಯರ ನಿಧನಕ್ಕೆ ಯಕ್ಷಗಾನ ದಿಗ್ಗಜರು, ಕಲಾಭಿಮಾನಿಗಳು, ಸಮಾಜದ ಗಣ್ಯರು ಕಂಬನಿ ಮಿಡಿದಿದ್ದಾರೆ.